ಚಿಕ್ಕಮಗಳೂರು

ಆ್ಯಂಬುಲೆನ್ಸ್‌ನಲ್ಲೇ ಹೆಣ್ಣುಮಗುವಿಗೆ ಜನ್ಮ ನೀಡಿದ ತಾಯಿ

Published On :

ನರಸಿಂಹರಾಜಪುರ: ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರನ್ನು 108 ಆ್ಯಂಬ್ಯುಲೆನ್ಸ್ ವಾಹನದಲ್ಲಿ ಆಸ್ಪತ್ರೆಗೆ ಕರೆ ತರುತ್ತಿದ್ದಾಗ ಆ್ಯಂಬ್ಯುಲೆನ್ಸ್ ವಾಹನದಲ್ಲೇ ಹೆರಿಗೆಯಾದ ಘಟನೆ ಇತ್ತೀಚೆಗೆ ನಡೆದಿದೆ.
 ಬಾಳೆಹೊನ್ನೂರು ಸಮೀಪದ ಮಸೀದಿ ಕೆರೆಯ ಹರೀಶ್ ಎಂಬವರ ಪತ್ನಿ ರಂಜಿತಾ 108 ಆ್ಯಂಬ್ಯುಲೆನ್ಸ್ ವಾಹನದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆಯಾಗಿದ್ದು, ಬೆಳಿಗ್ಗೆ 5 ಗಂಟೆಗೆ ಹೆರಿಗೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆರೋಗ್ಯ ರಕ್ಷಾ 108ಕ್ಕೆ ಕರೆ ಮಾಡಿದ್ದಾರೆ.
   ತಕ್ಷಣ ಸ್ಥಳಕ್ಕೆ ಆಗಮಿಸಿದ 108 ವಾಹನ ಮಹಿಳೆಯನ್ನು ಕರೆದುಕೊಂಡು ನರಸಿಂಹರಾಜಪುರ ಸರ್ಕಾರಿ ಆಸ್ಪತ್ರೆಗೆ ಬರುತ್ತಿದ್ದಾಗ ಮಾರ್ಗ ಮದ್ಯೆ ಹೊಟ್ಟೆ ನೋವು ಹೆಚ್ಚಾಗಿದ್ದರಿಂದ ವಾಹನ ನಿಲ್ಲಿಸಿ ಆ್ಯಂಬ್ಯುಲೆನ್ಸ್ ಸಿಬ್ಬಂದಿಯಾದ    ಬೋಜನಾಯಕ್,ಪ್ರಶಾಂತ್, ತ್ಯಾಗರಾಜ್ ಹಾಗೂ ವೇದಾವತಿ ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ. ನಂತರ ತಾಲೂಕು ಸರ್ಕಾರಿ ಆಸ್ಪತ್ರೆಗೆ ಸೇರಿಸಿದ್ದಾರೆ. ಆಸ್ಪತ್ರೆಯ ಹೆರಿಗೆ ತಜ್ಞ ವೈದ್ಯ ಡಾ. ಬಾಲಕೃಷ್ಣ ಅವರು ತಾಯಿ ಮತ್ತು ಮಗುವಿನ ಆರೋಗ್ಯ ಪರಿಶೀಲನೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.