ಚಿಕ್ಕಮಗಳೂರು

'ಕೆಬಿಎಂ ಮುಂದಿನ ಲೋಕಸಭಾ ಚುನಾವಣೆ ಅಭ್ಯರ್ಥಿಯಾಗಲಿ'

Published On :

ಕ.ಪ್ರ.ವಾರ್ತೆ ಟಿ ಬೀರೂರು ಟಿ  ಮೇ 19
ಮುಂದಿನ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಕೆ.ಬಿ. ಮಲ್ಲಿಕಾರ್ಜುನ್‌ರನ್ನು ಕಣಕ್ಕಿಳಿಸಲು ಮುಖಂಡರು, ಕಾರ್ಯಕರ್ತರು ಮತ್ತು ಅಭಿಮಾನಿಗಳ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.
ಬೀರೂರಿನ ಪತ್ರೆ ಕೆ. ಚನ್ನವೀರಪ್ಪಯ್ಯ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಚೈತನ್ಯ ಶೀಲತಾ ಕಾರ್ಯಕ್ರಮದಲ್ಲಿ ನಡೆದ ಸಭೆಯಲ್ಲಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಲ್. ಮೂರ್ತಿ,  ಜಿಲ್ಲಾ ವಕ್ತಾರ ಎ.ಎನ್. ಮಹೇಶ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಮಹೇಶ್ ಒಡೆಯರ್, ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೆ.ಎಸ್. ಆನಂದ್ ಸಮ್ಮುಖದಲ್ಲಿ ಸಭೆ ನಡೆಯಿತು.
ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಮಹೇಶ್ ಒಡೆಯರ್ ಮಾತನಾಡಿ, ಕೆ.ಬಿ. ಮಲ್ಲಿಕಾರ್ಜುನ್‌ರ ಸೋಲಿಗೆ ಎಲ್ಲರೂ ನೈತಿಕ ಹೊಣೆ ಹೊತ್ತು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಮಂಬರುವ ಹಾಸನ ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಸದೃಢಗೊಳಿಸಿ ಗೆಲ್ಲಿಸುವ ಪಣ ತೊಡಬೇಕಿದೆ.
ಕಡೂರು ಕ್ಷೇತ್ರದಲ್ಲಿ ಕೆ.ಎಂ.  ಕೃಷ್ಣಮೂರ್ತಿಯವರಷ್ಟೇ ರಾಜಕೀಯ ಹಿರಿತನ ಮತ್ತು ನೇರ ನಡೆ ನುಡಿ ಹೊಂದಿ ನಿಷ್ಪಕ್ಷಪಾತವಾಗಿ ರಾಜಕಾರಣಿಯಾಗಿ ಅನುಭವ ಹೊಂದಿರುವ ಕೆ.ಬಿ. ಮಲ್ಲಿಕಾರ್ಜುನ್‌ರನ್ನು ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿಸುವುದು ಸೂಕ್ತ ಎಂದು ಅಭಿಪ್ರಾಯ ಪಟ್ಟರು.
ಕೆ.ಬಿ. ಮಲ್ಲಿಕಾರ್ಜುನ್ ಮಾತನಾಡಿ, ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ. ಆದರೆ ಸೋಲಿಗೆ ನಾಲ್ವರು ಕಾರಣರಾಗಿದ್ದು ಮುಂದೆ ಅವರಿಗೆ ದೇವರು ಒಳ್ಳೆಯದನ್ನು ಮಾಡಲಿ ಎಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮೂರ್ತಿ ಮಾತನಾಡಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಫಲಿತಾಂಶ ಕುಸಿದಿರುವುದರ ನೈತಿಕ ಹೊಣೆ ಹೊರುವುದಾಗಿ ಹೇಳಿದರು. ಚಂದ್ರಪ್ಪ, ಸಾವಿತ್ರಿ ಗಂಗಪ್ಪ, ಶ್ರೀನಿವಾಸಮೂರ್ತಿ, ಕಡೂರು ಹಾಗೂ ಬೀರೂರು ಪುರಸಭಾ ಸದಸ್ಯರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.