ಚಿಕ್ಕಮಗಳೂರು

ಜೂ.1ರಿಂದ ಆರ್ಥಿಕ ಗಣತಿ: ಬಾಲಚಂದ್ರ

Published On :

ಕ.ಪ್ರ.ವಾರ್ತೆ ಟಿ ಚಿಕ್ಕಮಗಳೂರು ಟಿ  ಮೇ 19
ಆರ್ಥಿಕ ಗಣತಿ ಕಾರ್ಯಾಚರಣೆ ಜೂನ್ 1 ರಿಂದ 30 ರವರೆಗೆ ಜಿಲ್ಲೆಯಲ್ಲಿ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಬಾಲಚಂದ್ರ ಹೇಳಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 6ನೇ ಆರ್ಥಿಕ ಗಣತಿಯ ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಗಣತಿ ಕಾರ್ಯಕ್ಕಾಗಿ ಕಿಯೋನಿಕ್ಸ್ ಸಂಸ್ಥೆಯ ಮೂಲಕ ಜಿಲ್ಲೆಗೆ 897 ಗಣತಿದಾರರು ನಿಯೋಜನೆಯಾಗಲಿದ್ದಾರೆ ಎಂದರು.
ಬ್ಲಾಕ್‌ಗಳಾಗಿ ವಿಂಗಡಣೆ: ಗಣತಿ ಕಾರ್ಯಕ್ಕಾಗಿ ಜಿಲ್ಲೆಯ ಎಲ್ಲಾ ಪ್ರದೇಶಗಳನ್ನು ಆರ್ಥಿಕ ಗಣತಿ ಬ್ಲಾಕ್‌ಗಳಾಗಿ ವಿಂಗಡಿಸಲಾಗಿದೆ. ಜಿಲ್ಲೆಯ ಎಲ್ಲಾ ಪಿಡಿಓಗಳನ್ನು ಮೇಲ್ವಿಚಾರಕರಾಗಿ ಹಾಗೂ
ಆಯಾ ತಾಲೂಕಿನ ತಹಶೀಲ್ದಾರ್‌ಗಳನ್ನು ತಾಲೂಕಿನ ಗ್ರಾಮೀಣ ಪ್ರದೇಶಗಳಿಗೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳನ್ನು ಆಯಾ ಪಟ್ಟಣ ಪ್ರದೇಶ ವ್ಯಾಪ್ತಿಗೆ ಚಾರ್ಜ್ ಆಫೀಸರ್‌ಗಳನ್ನಾಗಿ ನೇಮಕ ಮಾಡಲಾಗುವುದು ಎಂದು ಬಾಲಚಂದ್ರ ಹೇಳಿದರು.
ಗಣತಿದಾರರು ಎಲ್ಲಾ ಮನೆ, ಕಟ್ಟಡ, ಉದ್ಯಮಗಳಿಗೆ ಭೇಟಿ ನೀಡಿ ನಿಗದಿತ ನಮೂನೆಯಲ್ಲಿ ಮಾಹಿತಿ ಸಂಗ್ರಹಿಸಲಿದ್ದಾರೆ. ಸಾರ್ವಜನಿಕರು, ಗಣತಿದಾರರು ಬಂದಾಗ ಆರ್ಥಿಕ ಗಣತಿ ಕಾರ್ಯಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಮಾಹಿತಿ ಸಂಗ್ರಹ: ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ. ಶಿವಶಂಕರ್ ಮಾತನಾಡಿ, ಆರ್ಥಿಕ ಗಣತಿಯ ಉದ್ದೇಶ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಮತ್ತು ಖಾಸಗಿ ವಲಯದಲ್ಲಿರುವ ಸಂಘಟಿತ, ಅಸಂಘಟಿತ ವಿಭಾಗಗಳ ವಿವಿಧ ಆರ್ಥಿಕ ಚಟುವಟಿಕೆಗಳನ್ನು ಹೊಂದಿರುವ ಉದ್ಯಮಗಳ ಮಾಹಿತಿ ಸಂಗ್ರಹಿಸುವುದಾಗಿದೆ. ಇದೊಂದು ಮಹತ್ತರ ಕಾರ್ಯವಾಗಿದ್ದು, ಎಲ್ಲರೂ ಇದಕ್ಕೆ ಸಹಕರಿಸಬೇಕು ಎಂದು ಹೇಳಿದರು.
ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ವೆಂಕಟೇಶ್ ಮಾತನಾಡಿ, ಆರ್ಥಿಕ ಗಣತಿ ಕಾರ್ಯಕ್ಕೆ ತಾಲೂಕು ಮಟ್ಟದ ಉಸ್ತುವಾರಿ ಸಮಿತಿ ಕಾರ್ಯಚರಿಸುತ್ತದೆ. ಜಿಲ್ಲೆಯಲ್ಲಿ ಒಟ್ಟು 1381 ಸಿಬ್ಬಂದಿ ಗಣತಿ ಕಾರ್ಯದಲ್ಲಿ ತೊಡಗಿಕೊಳ್ಳುವರು ಎಂದು ಹೇಳಿದರು.
ಸಭೆಯಲ್ಲಿ ಉಪ ವಿಭಾಗಾಧಿಕಾರಿ ಡಾ. ಪ್ರಶಾಂತ್, ನಗರಸಭೆ ಆಯುಕ್ತ ಎಚ್.ಜಿ. ಪ್ರಭಾಕರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.