'ರಸ್ತೆ ಕಾಮಗಾರಿ ಚುರುಕುಗೊಳಿಸಿ'
ಮೂಡಿಗೆರೆ: ಪಟ್ಟಣದ ಗಂಗನಮಕ್ಕಿಯಲ್ಲಿ ನಡೆಯುತ್ತಿರುವ ಕಾಂಕ್ರಿಟ್ ರಸ್ತೆಯ ಎರಡನೇ ಹಂತದ ಕಾಮಗಾರಿ ನಡೆಸಲು ಮೀನಮೇಷ ಎಣಿಸುತ್ತಿದ್ದು, ತಕ್ಷಣವೇ ಕಾಮಗಾರಿ ಪ್ರಾರಂಭಿಸದಿದ್ದಲ್ಲಿ 24ರ ಶುಕ್ರವಾರ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ಜನಶಕ್ತಿ ಸಂಘದ ರಾಜ್ಯ ಕಾರ್ಯಕಾರ್ಶಿ ಗೌಸ್ ಮೊಯ್ದೀನ್ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಮಗಾರಿ ಸಮಯದಲ್ಲಿ ಪರ್ಯಾಯ ಮಾರ್ಗದ ಬದಲು ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಬೇಕು. ಪೂರ್ವ ನಿರ್ಧಾರದಂತೆ ಹಳಸೆ ಅಥವಾ ಬೇರೆ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡುವುದನ್ನು ನಿಲ್ಲಿಸಬೇಕು. ಗಂಗನಮಕ್ಕಿಯ ಎರಡೂ ಬದಿ ರಸ್ತೆ ಒತ್ತುವರಿ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸುವ ಜೊತೆಗೆ ಮಳೆ ಮುಂಚಿತವಾಗಿ ಕಾಮಗಾರಿ ಮುಗಿಸುವಂತೆ ಒತ್ತಾಯಿಸಿದರು.
ಸಂಪೂರ್ಣ ಕಳಪೆ: ರೈತ ಮುಖಂಡ ಡಿ.ಆರ್. ದುಗ್ಗಪ್ಪಗೌಡ ಮಾತನಾಡಿ, ಕಾಮಗಾರಿ ಸಂಪೂರ್ಣ ಕಳಪೆ ಗುಣಮಟ್ಟದ್ದಾಗಿದೆ ಮತ್ತು ಅಧಿಕಾರಿಗಳು ಕಾಮಗಾರಿಯನ್ನು ಅವೈಜ್ಞಾನಿಕವಾಗಿ ನಡೆಸುತ್ತಿದ್ದು, ರಸ್ತೆಯ ಎರಡೂ ಬದಿಗಳಲ್ಲಿ ವಿದ್ಯುತ್ ಮತ್ತು ದೂರವಾಣಿ ಕಂಬ ಸ್ಥಳಾಂತರಿಸಿ, ಕೆಲವು ಕಟ್ಟಡ ತೆರವುಗೊಳಿಸಿದಲ್ಲಿ ಸಂಚಾರ ಸುಗಮವಾಗುತ್ತದೆ ಎಂದವರು ಹೇಳಿದರು.
ದಕ್ಷಿಣ ಕನ್ನಡ- ಬೇಲೂರು- ಹಾಸನ- ಬೆಂಗಳೂರು- ಮೈಸೂರು ಸೇರಿದಂತೆ ಹಲವು ಗ್ರಾಮೀಣ ಪ್ರದೇಶಗಳಿಗೆ ಹೋಗಲು ಮುಖ್ಯ ರಸ್ತೆ ಇದೊಂದೇ ಆಗಿದ್ದು, ರಸ್ತೆ ಅಗಲೀಕರಣ ಮಾಡಿ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ತಪ್ಪಿದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
ರೈತ ಮುಖಂಡ ದಯಾಕರ್, ಅಲ್ತಾಫ್ ಬಿಳಗುಳ, ಯು.ಎ. ರಮೇಶ್, ಫ್ರಾನ್ಸಿಸ್. ಸಾರಗೋಡು ಮಂಜುನಾಥ್, ಚಂದುವಳ್ಳಿ ರಮೇಶ್, ಹಳೇಕೆರೆ ರಘು, ಶೇಖರ್ ಮೊದಲಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

