ಚಿಕ್ಕಮಗಳೂರು

ಅರ್ಜಿ ಆಹ್ವಾನ

Published On :

ಚಿಕ್ಕಮಗಳೂರು: ಜಿಲ್ಲೆಯ 2012- 13ನೇ ಸಾಲಿನ ಎಲ್ಲಾ ವಿವಿಧ ಭಾರತೀಯ ತಯಾರಿಕಾ ಮದ್ಯ ಮಾರಾಟ ಸನ್ನದುದಾರರು ಈಗಾಗಲೇ ಹೊಂದಿರುವ ಸನ್ನದಿನ ಅವಧಿಯು ಜೂನ್ 3 ರಂದು ಮುಕ್ತಾಯಗೊಳ್ಳಲಿದ್ದು, ನಿಯಮ ಅನ್ವಯ ಸನ್ನದು ಅವಧಿಯು ಮುಕ್ತಾಯಗೊಳ್ಳುವ ಒಂದು ತಿಂಗಳ ಅವಧಿಯ ಮುಂಚಿತವಾಗಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಮೇ 31 ರೊಳಗಾಗಿ ಸನ್ನದು ಶುಲ್ಕ ಪಾವತಿಸಿ ಅಗತ್ಯ ದಾಖಲಾತಿಗಳೊಂದಿಗೆ ಕಾರ್ಯ ವ್ಯಾಪ್ತಿ ಅಬಕಾರಿ ವಲಯ ನಿರೀಕ್ಷಕರ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಎಲ್ಲಾ ವಿದಧ ಸನ್ನದುದಾರರಿಗೆ ಸೂಚಿಸಿದೆ. ನಂತರ ಬರುವಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಅಬಕಾರಿ ಇಲಾಖೆ ಪ್ರಕಟಣೆ ತಿಳಿಸಿದೆ.
ಬೇಸಿಗೆ ಶಿಬಿರ  
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಬೇಸಿಗೆ ಶಿಬಿರವನ್ನು ಮೇ 25ರಿಂದ ಜೂನ್ 3ರ ವರೆಗೆ ನಗರಸಭೆಯ ಆವರಣದಲ್ಲಿರುವ ಬಾಲಭವನದಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ಚಿತ್ರಕಲೆ ಕರಕುಶಲ ಕಲೆ, ಜೇಡಿಮಣ್ಣಿನ ಕಲೆ, ಸಮೂಹಗೀತೆ, ಸಮೂಹ ನೃತ್ಯ, ಯೋಗ ಹಾಗೂ ಕರಾಟೆ ಕಲಿಸಿಕೊಡಲಾಗುವುದು. ಆಸಕ್ತ 6 ರಿಂದ 16 ವರ್ಷದ ಒಳಗಿನ ಮಕ್ಕಳು ಶಿಬಿರದಲ್ಲಿ ಭಾಗವಹಿಸಬಹುದಾಗಿದ್ದು, ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳ ಕಚೇರಿ, ಚಿಕ್ಕಮಗಳೂರು ಅಥವಾ ಜಿಲ್ಲಾ ಬಾಲಭವನವನ್ನು ಸಂಪರ್ಕಿಸಲು ತಿಳಿಸಿದೆ.
ಅರ್ಜಿ ಆಹ್ವಾನ
ಉದ್ಯೋಗ ಮತ್ತು ತರಬೇತಿ ಇಲಾಖೆ ವತಿಯಿಂದ ಫಿಟ್ಟರ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್, ಮೆಕ್ಯಾನಿಕ್, ಡ್ರಾಪ್ಟ್‌ಮ್ಯಾನ್ ಮೆಕ್ಯಾನಿಕ್, ಮೆಷಿನಿಸ್ಟ್, ಎಂಆರ್‌ಎಸಿ, ಟೈಲರಿಂಗ್, ಆಟೋ ಎಲೆಕ್ಟ್ರಿಷಿಯನ್, ಟ್ಯ್ನರ್, ಎಲೆಕ್ಟ್ರೋಪ್ಲಾಟರ್ ಶಿಶಿಕ್ಷು ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾಸಿಕ ವೇತನ 2500, ವಸತಿ ಸೌಲಭ್ಯವಿರುತ್ತದೆ. ಅರ್ಜಿ ಸಲ್ಲಿಸಲು ಮೇ 23 ಕೊನೆಯ ದಿನವಾಗಿದ್ದು, ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಚಿಕ್ಕಮಗಳೂರು ಸಂಪರ್ಕಿಸಬಹುದಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.