ಸರಳ ವಿವಾಹದಿಂದ ದುಂದು ವೆಚ್ಚಕ್ಕೆ ಕಡಿವಾಣ
ಕ.ಪ್ರ.ವಾರ್ತೆ ಮೂಡಿಗೆರೆ ಮೇ 20 ಸರಳ ವಿವಾಹವಾಗಿ ಮನೆಗೆ ಹೋಗಿ ಅದ್ಧೂರಿ ಕಾರ್ಯಕ್ರಮ ಮಾಡಿ ದುಂದು ವೆಚ್ಚಮಾಡುವ ಬದಲು ಅದೇ ಹಣವನ್ನು ಸದ್ವಿನಿಯೋಗ ಮಾಡಿಕೊಂಡಲ್ಲಿ ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಸಾಧ್ಯ ಎಂದು ಹೊರನಾಡು ಶ್ರೀ ಕ್ಷೇತ್ರದ ಧರ್ಮಕರ್ತ ಡಾ. ಜಿ. ಭೀಮೇಶ್ವರ ಜೋಷಿ ಹೇಳಿದರು.
ಅವರು ಸೋಮವಾರ ಅನ್ನಪೂರ್ಣೇಶ್ವರಿ ದೇವಾಲಯದಿಂದ ಹಮ್ಮಿಕೊಳ್ಳಲಾಗಿದ್ದ ಕ್ಷೇತ್ರದ ಗ್ರಾಮೀಣಾಭಿವೃದ್ಧಿ ಯೋಜನೆಗಳ ಪರಿಕರ ವಿತರಣ ಕಾರ್ಯಕ್ರಮ ಮತ್ತು ಸಪ್ತಪದಿ ಯೋಜನೆಯಡಿ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶ್ರೀ ಕ್ಷೇತ್ರ ಕಳೆದ ಹಲವಾರು ವರ್ಷದಿಂದ ಗ್ರಾಮೀಣಾಭಿವೃದ್ಧಿ ಯೋಜನೆಗಳಾದ ಅನ್ನಧಾನ, ವಸ್ತ್ರದಾನ, ವಿದ್ಯಾದಾನ, ನ್ಯಾಯದಾನ ಸೇರಿದಂತೆ ಹತ್ತು ಹಲವು ಉತ್ತಮ ಯೋಜನೆ ಹಮ್ಮಿಕೊಂಡು ಬರುವುದರೊಂದಿಗೆ ಹಲವು ಉತ್ತಮ ಕಾರ್ಯಗಳನ್ನು ಹಮ್ಮಿಕೊಂಡು ಬರುತ್ತಿದೆ ಇದೀಗ 53 ಜೋಡಿ ವಧುವರರು ಸತಿಪತಿಗಳಾದರು ಎಂದು ತಿಳಿಸಿದರು.
ಸಾಮೂಹಿಕ ಉಪನಯನ: ಪ್ರತಿವರ್ಷ ಶಂಕರ ಜಯಂತಿಯಂದು ವಟುಗಳಿಗೆ ಸಾಮೂಹಿಕ ಉಪನಯನ ಮಾಡುತ್ತಿದ್ದು, ಗೃಹಲಕ್ಷ್ಮೀ ಯೋಜನೆಯಡಿ ಕಡುಬಡವರಿಗೆ ಹಂಚುಗಳನ್ನೂ ಉಚಿತವಾಗಿ ವಿತರಿಸಲಾಗುತ್ತಿದೆ. ಆನಂದ ಜ್ಯೋತಿ ಯೋಜನೆಯಲ್ಲಿ ವಿದ್ಯುತ್ ಸೌಲಭ್ಯ ಒದಗಿಸಲಾಗುತ್ತಿದ್ದು, ಅನ್ನದಾಸೋಹ ಯೋಜನೆಯಡಿ ರಾಜ್ಯ ಮತ್ತು ಅಂತಾರಾಜ್ಯ ಶಾಲೆಗಳಿಗೆ ಉಚಿತ ತಟ್ಟೆ ಲೋಟ, ಮಹಿಳಾ ಅಭಿವೃದ್ಧಿ ಯೋಜನೆಯಲ್ಲಿ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರ, ಧನ್ವಂತರಿ ಯೋಜನೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಗುತ್ತಿದೆ ಎಂದರು.
ಆದಿಚುಂಚನಗಿರಿ ಶಾಖಾಮಠ ಶೃಂಗೇರಿಯ ಗುಣಾನಾಥ ಶ್ರೀ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಮಲೆನಾಡಿನಲ್ಲಿ ಅದರಲ್ಲೂ ಕಳಸ ಭಾಗದಲ್ಲಿ ಇನಾಂ ಭೂಮಿ, ಹುಲಿಯೋಜನೆ, ಡೀಮ್ಡ್ ಫಾರೆಸ್ಟ್ನಂತಹ ಜ್ವಲಂತ ಸಮಸ್ಯೆ ಅಧಿಕವಾಗಿದ್ದು, ಅದಕ್ಕೆ ಪರಿಹಾರ ಹುಡುಕುವುದಾಗಿ ತಿಳಿಸಿದರು. ಕ್ಷೇತ್ರದಲ್ಲಿ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದ್ದು ಹೆಮ್ಮೆಯ ಸಂಗತಿಯಾಗಿದೆ ಎಂದರು.
ಶೃಂಗೇರಿ ಶಾಸಕ ಡಿ.ಎನ್. ಜೀವರಾಜ್ ಮಾತನಾಡಿ, ತಮ್ಮ ಸರ್ಕಾರ ಆಡಳಿತದಲ್ಲಿದ್ದಾಗ ಇನಾಂ ಭೂಮಿ ಸಮಸ್ಯೆ ವಿಷಯವಾಗಿ ಗಂಭಿರವಾಗಿ ಪರಿಗಣಿಸಿ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದು, ಇಂದಿನ ಸರ್ಕಾರದ ಜೊತೆ ಸಮಸ್ಯೆ ಬಗ್ಗೆ ಮಾತು ಕತೆ ನಡೆಸಿ, ಸಮಸ್ಯೆ ಪರಿಹರಿಸಲು ಚಿಂತನೆ ನಡೆಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಜಿಪಂ ಸದಸ್ಯೆ ಕವಿತಾಚಂದ್ರು, ಗ್ರಾಪಂ ಅಧ್ಯಕ್ಷೆ ಪ್ರೇಮಾ ಹರಿಪೂಜಾರಿ, ತಾಪಂ ಅಧ್ಯಕ್ಷ ಎಂ.ಎ. ಶೇಷಗಿರಿ, ರಾಜಲಕ್ಷ್ಮೀ ಬಿ. ಜೋಷಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

