ಚಿಕ್ಕಮಗಳೂರು

ಅರ್ಜಿ ಆಹ್ವಾನ

Published On :

ಚಿಕ್ಕಮಗಳೂರು: ಡಿಫೆನ್ಸ್ ರಿಸರ್ಚ್ ಆಂಡ್ ಡೆವಲಪ್‌ಮೆಂಟ್ ಆರ್ಗನೈಸೇಷನ್ (ಡಿಆರ್‌ಡಿಒ)ನಲ್ಲಿ ವಿವಿಧ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 27 ಕೊನೆಯದಿನವಾಗಿದ್ದು, ಎಸ್.ಎಸ್.ಎಲ್.ಸಿ-ಡಿಎಲ್‌ಪಿಯುಸಿ- ಕಂಪ್ಯೂಟರ್ ಐಟಿಐ ಡಿಪ್ಲೋಮೊ ಬಿಎಸ್‌ಸಿ ವಿದಾರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಚಿಕ್ಕಮಗಳೂರು ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಸ್ವಪ್ನಗೆ 529 ಅಂಕ
ತರೀಕೆರೆ: ಈ ಬಾರಿ ಪ್ರಕಟಗೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಇಲ್ಲಿಗೆ ಸಮೀಪದ ಕುಡ್ಲೂರು ಗ್ರಾಮದ ಮಹೇಶ್ವರ ಪ್ರೌಡಶಾಲೆಯ ವಿದ್ಯಾರ್ಥಿನಿ ಆರ್. ಸ್ವಪ್ನ 529 ಅಂಕ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.
ಸಾಮಾನ್ಯ ಸಭೆ   
ಚಿಕ್ಕಮಗಳೂರು ತಾಲ್ಲೂಕು ಪಂಚಾಯ್ತಿಯ ಸರ್ವ ಸದಸ್ಯರ ಸಾಮಾನ್ಯ ಸಭೆಯನ್ನು ಮೇ 24 ರಂದು ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷ ಬಿ.ಎಸ್. ಬಸವರಾಜ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ದ್ಯಾವಿನಕೆರೆ ಜಾತ್ರೆ
ಶಿವಮೊಗ್ಗ: ಆಯನೂರಿನ ಸಮೀಪದಲ್ಲಿರುವ ದ್ಯಾವಿನಕೆರೆಯ ಶ್ರೀ ಸಿದ್ದೇಶ್ವರ ಸ್ವಾಮಿ ಮತ್ತು ಶ್ರೀ ಆದಿಶಕ್ತಿ ಚೌಡೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವ ಮೇ 20ರಿಂದ ಆರಂಭವಾಗಿದ್ದು, 26ವರೆಗೆ ನಡೆಯಲಿದೆ. 24ರಂದು ರಥದ ಕಳಶಾರಾಧನೆ ನಂತರ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಪ್ರಸಾದ ವಿನಿಯೋಗ, 25ರಂದು ಶ್ರೀ ಸ್ವಾಮಿಯ ರಥಾರೋಹಣ ನಡೆಯಲಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.