ಚಿಕ್ಕಮಗಳೂರು

ಜೂ.24ರಂದು ಬಸವೇಶ್ವರ ಜಯಂತಿ

Published On :

ಚಿಕ್ಕಮಗಳೂರು: ನಗರದ ಶ್ರೀ ಜಗದ್ಗುರು ರೇಣುಕಾಚಾರ್ಯ ಟ್ರಸ್ಟ್ ವತಿಯಿಂದ ಜೂನ್ 24 ರಂದು 13ನೇ ವರ್ಷದ ಶ್ರೀಜಗದ್ಗುರು ರೇಣುಕಾಚಾರ್ಯರು ಹಾಗೂ ಶ್ರೀ ಜಗಜ್ಯೋತಿ ಬಸವೇಶ್ವರರ ಜಯಂತಿ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.
ಶ್ರೀ ಮದ್ರಂಭಾಪುರಿ ವೀರಸೋಮೇಶ್ವರ ಜಗದ್ಗುರುಗಳವರ ಸಾನ್ನಿಧ್ಯದಲ್ಲಿ ನಗರದಲ್ಲಿ ರೇಣುಕಾಚಾರ್ಯ ಸಮುದಾಯ ಭವನದಲ್ಲಿ ನಡೆಯುವ ಸಮಾರಂಭದ ಅಧ್ಯಕ್ಷತೆಯನ್ನು ಟ್ರಸ್ಟ್ ಅಧ್ಯಕ್ಷೆ ಗೌರಮ್ಮ ಬಸವೇಗೌಡ ವಹಿಸುವರು. ಅಂದು ಬೆಳಿಗ್ಗೆ ವಿಶ್ವಶಾಂತಿಗಾಗಿ ಪೂಜ್ಯ ಜಗದ್ಗುರುಗಳವರ ಇಷ್ಟಲಿಂಗ ಮಹಾಪೂಜೆ ನೆರವೇರಲಿದೆ.
ಇದೇ ಸಂದರ್ಭದಲ್ಲಿ ತಾಲೂಕಿನ ವೀರಶೈವ ಬಾಂಧವವರಿಗಾಗಿ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ವೀರಶೈವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ವಿತರಿಸಲು ಉದ್ದೇಶಿಸಲಾಗಿದೆ. ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವೈದಕೀಯ ಶಿಕ್ಷಣ ವಿದ್ಯಾರ್ಥಿಗಳಿಗೆ 20 ಸಾವಿರ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 15 ಸಾವಿರ, ಎಂ.ಬಿ.ಎ. ಮತ್ತು ಎಂ.ಸಿ.ಎ. ವಿದ್ಯಾರ್ಥಿಗಳಿಗೆ 10 ಸಾವಿರ, ಡಿಪ್ಲೋಮೋ ವಿದ್ಯಾರ್ಥಿಗಳಿಗೆ 8 ಸಾವಿರ ದಂತೆ ಪ್ರೋತ್ಸಾಹಧನ ವಿತರಿಸಲಾಗುವುದೆಂದು ಕಾರ್ಯದರ್ಶಿ ಸಿ.ವಿ. ಮಲ್ಲಿಕಾರ್ಜುನ ತಿಳಿಸಿದ್ದಾರೆ. ಆಸಕ್ತರು ಜೂನ್ 15 ರೊಳಗೆ ಹೆಸರು ನೋಂದಾಯಿಸಲು ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.