ಚಿಕ್ಕಮಗಳೂರು

ಕುಡಿವ ನೀರು ಸಮಸ್ಯೆಯಾಗದಂತೆ ನೋಡಿಕೊಳ್ಳಿ

Published On :

ಕ.ಪ್ರ.ವಾರ್ತ್ಣೆ ಚಿಕ್ಕಮಗಳೂರ್ಣು ಮೇ 21
ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
   ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಚಿಕ್ಕಮಗಳೂರು ತಾಲೂಕು ಪಂಚಾಯ್ತಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲೂಕಿನ ಕೆಲವು ಭಾಗಗಳಲ್ಲಿ ಮಳೆ ಬಾರದೆ ಕುಡಿಯುವ ನೀರಿನ ಸಮಸ್ಯೆ ಇರುವುದು ಕಂಡುಬಂದಿದೆ ಎಂದರು.
ಎಚ್ಚರ ವಹಿಸಿ: ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಪಂಚಾಯತ್ ಎಂಜಿನಿಯರಿಂಗ್ ಇಲಾಖೆ ಹಾಗೂ ಮೆಸ್ಕಾಂ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರ ವಹಿಸಬೇಕು ಹೇಳಿದರು.  
   ಅನುಪಯುಕ್ತ ಕೊಳವೆ ಬಾವಿಗಳ ವಿದ್ಯುತ್ ಚ್ಛಕ್ತಿ ಸೌಲಭ್ಯವನ್ನು ಕಡಿತ ಹಾಗೂ ಬೀದಿ ದೀಪಗಳಿಗೆ ಮೀಟರ್ ಅಳವಡಿಸುವುದರೊಂದಿಗೆ ವಿದ್ಯುತ್‌ಚ್ಛಕ್ತಿ ಶುಲ್ಕ ಕಡಿಮೆಗೊಳಿಸಬಹುದೆಂದ ಅವರು, ಪ್ರತಿ ಮನೆಗೆ ಶೌಚಾಲಯ ನಿರ್ಮಿಸುವುದರೊಂದಿಗೆ ಸಂಪೂರ್ಣ ನೈರ್ಮಲ್ಯ ಗ್ರಾಮವಾಗಿಸಲು ಒತ್ತು ಕೊಡಬೇಕೆಂದರು.
ಕೃಷಿ ಇಲಾಖಾಧಿಕಾರಿಗಳಿಂದ ಮಳೆ ಬೆಳೆ, ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ದಾಸ್ತಾನುಗಳ ಬಗ್ಗೆ ಮಾಹಿತಿ ಪಡೆದ ಅವರು, ಬಿತ್ತನೆ ಬೀಜ ಹಾಗೂ ರಸಗೊಬ್ಬರದ ವಿತರಣೆಯಲ್ಲಿ ಗೊಂದಲವಾಗದಂತೆ ನೋಡಿಕೊಳ್ಳಿ ಎಂದು ತಿಳಿಸಿದರು.
ಕಾಮಗಾರಿ ತ್ವರಿತಕ್ಕೆ ಸೂಚನೆ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಶಂಕರ್ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಜನಸಂಖ್ಯೆಯನ್ನು ಆಧರಿಸಿ ಟ್ಯಾಂಕ್‌ಗಳ ಮೂಲಕ ನೀರಿನ ಸರಬರಾಜು ಮಾಡಬೇಕು. ಕುಡಿಯುವ ನೀರಿನ ಸೌಲಭ್ಯಗಳಿಗೆ ವಿದ್ಯುತ್‌ಚ್ಛಕ್ತಿ ಸಂಪರ್ಕಗಳ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳಲು ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.  
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಸವಿತಾ ರಮೇಶ್, ಹೇಮಾವತಿ ದೇವೇಗೌಡ, ಭಾಗ್ಯ ರಂಗನಾಥ್, ತಾಪಂ ಅಧ್ಯಕ್ಷ ಬಸವರಾಜ್, ಉಪಾಧ್ಯಕ್ಷ ಪುಟ್ಟೇಗೌಡ, ಯೋಜನಾಧಿಕಾರಿ ಸುಬ್ಬರಾವ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಚಿಕ್ಕಮಗಳೂರು ತಾಲೂಕಿನ ಪಂಚಾಯಿತಿ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.