2ನೇ ತಾ.ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧತೆ
ಕ.ಪ್ರ.ವಾರ್ತೆ, ಹೊಸದುರ್ಗ, ಮೇ 22
ತಾಲೂಕಿನ ಐತಿಹಾಸಿಕ ಹೋಬಳಿಯಾದ ಶ್ರೀರಾಂಪುರದಲ್ಲಿ 2 ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ 25 ಮತ್ತು 26 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಸಿದ್ಧತೆಗಳು ನಡೆಯುತ್ತಿವೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಪ್ರಧಾನ ಕಾರ್ಯದರ್ಶಿ ನಾಗತಿಹಳ್ಳಿ ಮಂಜುನಾಥ್ ಹಾಗೂ ಬಾಗೂರು ಕೇಶವಮೂರ್ತಿ ತಿಳಿಸಿದ್ದಾರೆ.
25 ರಿಂದ ಶ್ರೀರಾಂಪುರದ ಶ್ರೀ ಗುರು ಪರಪ್ಪ ಸ್ವಾಮಿ ರಂಗ ಮಂದಿರ, ಶ್ರೀರಾಂಪುರ ಸಿರುಮ ವೇದಿಕೆ, ಕುಮಾರಮಲ್ಲ ಮಹಾದ್ವಾರದಲ್ಲಿ ನಡೆಯಲಿರುವ ಸಮ್ಮೇಳನದ ಅಧ್ಯಕ್ಷರಾಗಿ ಜಾನಪದ ತಜ್ಞ ಬಾಗೂರು ನಾಗರಾಜಪ್ಪ ಆಯ್ಕೆಯಾಗಿದ್ದಾರೆ.
ಸಮ್ಮೇಳನವನ್ನು ಶಾಸಕ ಬಿ.ಜಿ. ಗೋವಿಂದಪ್ಪ ಉದ್ಘಾಟಿಸಲಿದ್ದಾರೆ. ನಿಕಟ ಪೂರ್ವ ಸಮ್ಮೇಳನಾಧ್ಯಕ್ಷ ಶ್ರೀಶೈಲಾರಾಧ್ಯ, ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಕರಿಯಪ್ಪ ಮಾಳಿಗೆ, ತಾಲೂಕು ಜಾನಪದ ಪರಿಷತ್ನ್ನು ಈ ಸಂದರ್ಭದಲ್ಲಿ ಉದ್ಘಾಟಿಸಲಿದ್ದಾರೆ.
ಭಾಗವಹಿಸುವವರು: ಸಮ್ಮೇಳನದಲ್ಲಿ ಜಿಲ್ಲೆಯ ಎಂಎಲ್ಸಿಗಳು, ಜಿಪಂ ಸದಸ್ಯರು, ತಾಪಂ ಅಧ್ಯಕ್ಷರು, ಸದಸ್ಯರು, ಶ್ರೀರಾಂಪುರ ಗ್ರಾಪಂ ಅಧ್ಯಕ್ಷರು, ಸದಸ್ಯರು, ತಾಲೂಕಿನ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಮ್ಮೇಳನದಲ್ಲಿ ಜಾನಪದ ಸಂಸ್ಕೃತಿ, ಬೂದಿಹಾಳಿನ ಇತಿಹಾಸ ಕುರಿತ ಗೋಷ್ಠಿಗಳು, ಕೃಷಿ ಗೋಷ್ಠಿ, ಕವಿ ಗೋಷ್ಠಿ, ಮಹಿಳಾ ಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿದೆ.
ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ನಗೆ ಹಬ್ಬ ಕಾರ್ಯಕ್ರಮಗಳು ನೆರವೇರಲಿದೆ.
ಸಮಾರೋಪ ಸಮಾರಂಭದಲ್ಲಿ ಬೆಲಗೂರು ಬಿಂದು ಮಾಧವ ಶರ್ಮಾ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಜಾನಪದ ವಿದ್ವಾಂಸ ಡಾ. ಮೀರಾಸಾಬಿಹಳ್ಳಿ ಶಿವಣ್ಣ ಸಮಾರೋಪ ಭಾಷಣ ನೆರವೇರಿಸಲಿದ್ದಾರೆ.
ಅತಿಥಿಗಳಾಗಿ ಮಾಜಿ ಶಾಸಕ ಗೂಳಿಹಟ್ಟಿ ಡಿ. ಶೇಖರ್, ಇಲ್ಕಲ್ ವಿಜಯಕುಮಾರ್, ಟಿ.ಎಚ್. ಬಸವರಾಜ್, ಜಿಪಂ , ತಾಲೂಕು ಪಂಚಾಯಿತಿ ಸದಸ್ಯರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

