ಚಿಕ್ಕಮಗಳೂರು

ಆರೋಗ್ಯ ಬಗ್ಗೆ ಕಾಳಜಿ ವಹಿಸಿ: ಡಾ. ಪಾಲಾಕ್ಷ

Published On :

ಕ.ಪ್ರ.ವಾರ್ತೆ ಟಿ ಚಳ್ಳಕೆರೆ ಟಿ         ಮೇ 22
ಗ್ರಾಮೀಣ ಭಾಗದ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಹಾಗೂ ಗರ್ಭಿಣಿಯರಿಗೆ ಜವಬ್ದಾರಿಯುತವಾಗಿ ಸೇವೆ ಒದಗಿಸಲಾಗುತ್ತಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ. ಪಾಲಾಕ್ಷ ಹೇಳಿದರು.
ತಾಲೂಕಿನ ಸಾಣೀಕೆರೆ ಗ್ರಾಮದಲ್ಲಿ ಗ್ರಾಮಸಂಸ್ಥೆ ಚಿತ್ರದುರ್ಗ, ಸಾಣೀಕೆರೆ ನಬಾರ್ಡ್ ಜಲಾನಯನ ಅಭಿವೃದ್ಧಿ ಸಮಿತಿ, ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಸಾಣೀಕೆರೆ ಆಶ್ರಯದಲ್ಲಿ ಬುಧವಾರ ವಿವಿಧ ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ಆರೋಗ್ಯ ತಪಾಸಣೆ ಹಾಗೂ ರಕ್ತಗುಂಪು ಪರಿಶೀಲನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕೇಂದ್ರ ಹಾಗೂ ರಾಜ್ಯಸರ್ಕಾರದಿಂದ ಗ್ರಾಮೀಣ ಜನರಿಗೆ ಆರೋಗ್ಯ ಸುಧಾರಣೆಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳನ್ನು ಸದುಪಯೋಗ ಮಾಡಿಕೊಂಡು ಗರ್ಭಿಣಿಯರು ಆರೋಗ್ಯವಂತರಾಗಬೇಕೆಂದು ತಿಳಿಸಿದರು.
ಗ್ರಾಪಂ ಅಧ್ಯಕ್ಷ ಓಬಣ್ಣ, ತಾಪಂ ಸದಸ್ಯೆ ಹೇಮಲಾತ, ಡಾ. ಸುಶಾಂತ, ನೇತ್ರ ಪರೀಕ್ಷಕ ಪಿ.ಆರ್. ಕಂಬಣ್ಣ, ರಕ್ತಪರೀಕ್ಷಕ ತಿಪ್ಪೇಸ್ವಾಮಿ, ವಿಕ್ರಮ್, ವಿಜಯ್, ಬಸವರಾಜ್, ಕೆ. ಸಿದ್ದಪ್ಪ, ಬಸವರಾಜಪ್ಪ, ಮಂಜುಳ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.