ಚಿಕ್ಕಮಗಳೂರು

ಕೃಷಿ ಜತೆಗೆ ಗಿಡ ಮರ ಬೆಳೆಸಿ

Published On :

ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಮೇ 22
ರೈತರು ತಮ್ಮ ಕೃಷಿ ಜಮೀನುಗಳಲ್ಲಿ ದವಸ ದಾನ್ಯಗಳನ್ನು ಬೆಳೆಸುವುದರ ಜೊತೆಗೆ ಗಿಡ ಮರಗಳನ್ನು ಬೆಳೆಸಲು ಮುಂದಾಗಬೇಕು ಎಂದು ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಶಿವಣ್ಣಗೌಡ ಕರೆ ನೀಡಿದ್ದಾರೆ.
ನಗರದ ಮತ್ತಾವರದ ಪರಿಸರ ಮಾಹಿತಿ ಕೇಂದ್ರದಲ್ಲಿ ಅರಣ್ಯ ಇಲಾಖೆ ವತಿಯಿಂದ ಮಂಗಳವಾರ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಏರ್ಪಡಿಸಲಾಗಿದ್ದ ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಯ ಅನುಷ್ಠಾನ ಚುರುಕುಗೊಳಿಸುವ ಕ್ರಮ ಹಾಗೂ ಪ್ರಚಾರದ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರೈತರು ತಮ್ಮ ಕೃಷಿ ಜಮೀನಿನಲ್ಲಿ ದವಸ ಧಾನ್ಯಗಳನ್ನು ಬೆಳೆಯುವುದರ ಜೊತೆಗೆ ತಮ್ಮ ಜಮೀನಿನ ಸುತ್ತ ಮುತ್ತಲ  ಬದುಗಳಲ್ಲಿ, ದಿಣ್ಣೆ, ಖರಾಬ್, ಕೊರಕುಲ್ಲು ಹಾಗೂ ನಾಲದಂಡೆಗಳಲ್ಲಿ ಕೃಷಿ ಉಪಕರಣ, ಮರ ಮುಟ್ಟು, ಕಿರು ಅರಣ್ಯ ಉತ್ಪನ್ನ ಕೊಡುವಂತಹ ಗಿಡ ಮರಗಳನ್ನು ಬೆಳೆಸಬಹುದೆಂದ ಅವರು, ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಯಡಿ ರಿಯಾಯಿತಿ ದರದಲ್ಲಿ ಸಸಿಗಳ ಪೂರೈಕೆ ಮತ್ತು ಅವುಗಳ ಆರೈಕೆಗೆ ಪ್ರೋತ್ಸಾಹ ಧನವನ್ನು ನೀಡಲಾಗುವುದು ಎಂದರು.
31ರಂದು ಕೊನೇ ದಿನ: ಆಸಕ್ತ ರೈತರು, ಸಂಘ ಸಂಸ್ಥೆಗಳು ತಮಗೆ ಬೇಕಾಗಿರುವ ಸಸಿಗಳ ಜಾತಿ, ಸಂಖ್ಯೆಗಳ ವಿವರವನ್ನು ಒಳಗೊಂಡ ಅರ್ಜಿಯನ್ನು ಮೇ 31 ರೊಳಗೆ ವಲಯ ಅರಣ್ಯಾಧಿಕಾರಿಗಳ ಕಚೇರಿಯಲ್ಲಿ ಸಲ್ಲಿಸಬಹುದಾಗಿದೆ ಎಂದು ಹೇಳಿದರು.
ಜಮೀನಿನ ಸುತ್ತಲು ಮರಗಳನ್ನು ಬೆಳೆಸುವುದರಿಂದ ರಭಸವಾಗಿ ಬೀಸುವ ಗಾಳಿಯನ್ನು ತಡೆದು ಕೃಷಿ ಜಮೀನಿನ ತೇವಾಂಶವನ್ನು ತಡೆಯಬಹುದೆಂದ ಅವರು, ಮರಗಳ ಫಸಲಿನಿಂದ ಆರ್ಥಿಕ ಲಾಭ ಪಡೆಯಬಹುದು ಎಂದರು.
ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜಿ.ಎಸ್. ಯಾದವ್ ಮಾತನಾಡಿ, ಆಸಕ್ತ ರೈತರು ತಮಗೆ ಬೇಕಾದ ಸಸಿಗಳನ್ನು ಅರಣ್ಯ ಇಲಾಖೆ ಸಸ್ಯ ಕ್ಷೇತ್ರದಿಂದ ನೇರವಾಗಿ ಪಡೆಯಬಹುದು. ಈ ಯೋಜನೆಯಿಂದ ಅರಣ್ಯೀಕರಣದ ಕಾರ್ಯದಲ್ಲಿ ಸಾರ್ವಜನಿಕರು ಒತ್ತು ನೀಡಿದಂತಾಗುತ್ತದೆ ಎಂದು ಹೇಳಿದರು.  
ಕಾರ್ಯಗಾರದಲ್ಲಿ ನಿವೃತ್ತ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಲ್ಲಿಕಾರ್ಜುನ್, ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಯ ಬಗ್ಗೆ  ಶಿಬಿರಾರ್ಥಿಗಳಿಗೆ ಉಪನ್ಯಾಸ ನೀಡಿದರು.
ಸಭೆಯಲ್ಲಿ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಭದ್ರ ಹುಲಿ ಯೋಜನೆಯ ನಿರ್ದೇಶಕರಾದ ಉದುಪುಡಿ, ಕೊಪ್ಪ ವಿಭಾಗದ ಉಪ ಸಂರಕ್ಷಣಾಧಿಕಾರಿ ಡಾ. ಶಂಕರ್, ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.