ಜಲಾನಯನ ನಿರ್ವಹಣೆ ಜಾಥಾ
ಹೊಸದುರ್ಗ: ಜಲಾನಯನ ನಿರ್ವಹಣೆ ಯೋಜನೆಗಳು, ಗ್ರಾಮ ಸಭೆಗಳು ಮತ್ತು ಜಾಥಾ ಕಾರ್ಯಕ್ರಮಗಳು ಅರಿವು ಮೂಡಿಸಬೇಕು ಎಂದು ತಾಲೂಕು ಜಲಾನಯನ ಅಧಿಕಾರಿ ಡಾ.ಎಚ್.ಜಿ. ಶಿವರುದ್ರಪ್ಪ ತಿಳಿಸಿದರು.
ತಾಲೂಕಿನ ಬಲ್ಲಾಳಸಮುದ್ರ ಗೊಲ್ಲರಹಟ್ಟಿಯಲ್ಲಿ ಜಲಾನಯನ ಅಭಿವೃದ್ಧಿ ಇಲಾಖೆ ಹಾಗೂ ಗ್ರಾಮ (ಗ್ರಾಮೀಣ ಅಭಿವೃದ್ಧಿ ಅಧ್ಯಯನ ಕೇಂದ್ರ) ಕ್ಷೇತ್ರ ಸರ್ಕಾರೇತರ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಸಮಗ್ರ ಜಲಾನಯನ ನಿರ್ವಹಣೆ ಕಾರ್ಯಕ್ರಮ ಮೂರನೇ ಬ್ಯಾಚ್ನ ಬಲ್ಲಾಳಸಮುದ್ರ ಉಪ ಜಲಾನಯನ ಗ್ರಾಮಸಭೆಗಳು ಮತ್ತು ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿ, ಯೋಜನೆಯ ಪರಿಚಯ ಕಾರ್ಯಕ್ಷೇತ್ರಕ್ಕೆ ಒಳಪಡುವ ಗ್ರಾಮಗಳಲ್ಲಿ ಕೈಗೊಳ್ಳುವ ಕಾರ್ಯ ಚಟುವಟಿಕೆಗಳ ಬಗ್ಗೆ ಸಮಗ್ರವಾಗಿ ತಿಳಿಸಿ ಸದುಪಯೋಗ ಪಡೆಯುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಜಲಾನಯನ ಸಹಾಯಕ ಕೃಷಿ ಅಧಿಕಾರಿ ಬಸವರಾಜ್ ಮಾನ್ಯಾಳ್ ತಂಡದ ನಾಯಕ ಚಿದಾನಂದ ಜಿ.ಎಂ, ಐ.ಜಿ.ಎ. ಪರಿಣಿತ, ಬಾಲರಾಜು ಎಸ್, ಹಾಗೂ ಸಿಬ್ಬಂದಿ ವರ್ಗ ಮೊದಲಾದವರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

