ಚಿಕ್ಕಮಗಳೂರು

ಬಾಲ್ಯದಿಂದಲೇ ಕೌಶಲ್ಯ ಕುರಿತು ಆಸಕ್ತಿ ಮೂಡಿಸಿ

Published On :

ಮೂಡಿಗೆರೆ: ಬಾಲ್ಯದಿಂದಲೇ ಮಕ್ಕಳಿಗೆ ಕೌಶಲ್ಯಗಳ ಬಗ್ಗೆ ಆಸಕ್ತಿ ಮೂಡಿಸುವಂಥ ಶಿಕ್ಷಣ ನೀಡಬೇಕು ಎಂದು ತಾಪಂ ಸಿಇಒ ಚೆನ್ನಬಸಪ್ಪ ಮೇಕಾಲಿ ಅಭಿಪ್ರಾಯಪಟ್ಟರು.
ಹೆಸಗಲ್ ಗ್ರಾಪಂನ ಬಿಳಗುಳ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬಾಲಭವನ ಸೊಸೈಟಿ ಬೆಂಗಳೂರು ವತಿಯಿಂದ ಹಮ್ಮಿಕೊಳ್ಳಲಾಗಿದ್ದ 10 ದಿನಗಳ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಕೌಸಲ್ಯದಿಂದ ವಂಚಿತರಾಗಬಾರದು ಎಂಬ ನಿಲುವಿನೊಂದಿಗೆ ಸರ್ಕಾರವೂ ಮಕ್ಕಳಿಗೆ ರಜಾ ಸಮಯದಲ್ಲಿ ಅನೇಕ ಕೌಶಲ್ಯಗಳನ್ನು ಮೂಡಿಸಲು ಬೇಸಿಗೆ ಶಿಬಿರವನ್ನು ಹಮ್ಮಿಕೊಂಡಿದೆ. ಇದರ ಸದುಪಯೋಗವನ್ನು ಪಡೆದುಕೊಂಡು ಪಠ್ಯೇತರ ಚಟುವಟಿಕೆಯಲ್ಲಿ ಬಾಗಿಯಾಗುವಂತೆ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಬಿ.ಎಚ್. ಕೃಷ್ಣಪ್ಪ 10ದಿನಗಳ ಕಾಲ ನಡೆಯುವ ಕೌಶಲ್ಯ ತರಬೇತಿಯ ಬಗ್ಗೆ ವಿವರಣೆ ನೀಡಿದರು.
ಈ ಸಂದರ್ಭದಲ್ಲಿ ಹೆಸಗಲ್ ಗ್ರಾಪಂ ಅಧ್ಯಕ್ಷೆ ನಳಿನಾ ತ್ಯಾಗರಾಜ್, ಶಾಲಾ ಮಂಡಳಿ ಸದಸ್ಯರು, ಮುಖ್ಯಶಿಕ್ಷಕರು, ತರಬೇತುದಾರರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.