ಮೋಟಮ್ಮಗೆ ಸಚಿವ ಸ್ಥಾನ ನೀಡಿ
ಕ.ಪ್ರ.ವಾರ್ತೆ ಟಿ ಚಿಕ್ಕಮಗಳೂರು ಟಿ ಮೇ 22
ವಿಧಾನಪರಿಷತ್ ಸದಸ್ಯೆ ಮೋಟಮ್ಮ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ದಲಿತ ಸಂಘಟನೆಯವರು ಬುಧವಾರ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಇದಕ್ಕೂ ಮುನ್ನ ನಗರದ ಹಳೇ ತಾಲೂಕು ಕಚೇರಿಯಿಂದ ಮೆರವಣಿಗೆಯಲ್ಲಿ ಹೊರಟ ಕಾರ್ಯಕರ್ತರು ಇಲ್ಲಿನ ಮಲ್ಲಂದೂರು ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಎದುರು ಧರಣಿ ನಡೆಸಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ಮಹಮದ್ ಅವರ ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿರುವ ಮನವಿಯಲ್ಲಿ ರಾಜ್ಯದಲ್ಲಿ ಜನರ ಅಪೇಕ್ಷೆಯಂತೆ ಕಾಂಗ್ರೆಸ್ ಸರ್ಕಾರ ರಚನೆಯಾಗಿರುವುದಕ್ಕೆ ಅಭಿನಂದನೆ ಸಲ್ಲಿಸಲಾಗುವುದು. ಆದರೆ, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ನ ಹಿರಿಯ ದಲಿತ ಮುಖಂಡರುಗಳು ತಮ್ಮ ಸಚಿವ ಸಂಪುಟದಲ್ಲಿ ಸೇರ್ಪಡೆಗೊಳ್ಳದೇ ಇರುವುದು ತುಂಬಾ ನೋವಿನ ಸಂಗತಿಯಾಗಿದೆ.
ರಾಜ್ಯದ ಹಿರಿಯ ದಲಿತ ಮಹಿಳಾ ಕಾಂಗ್ರೆಸಿಗರು ಹಾಗೂ ವಿಧಾನಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕಿಯಾಗಿ ಕೆಲಸ ಮಾಡಿದ ಮೋಟಮ್ಮನವರು ನಮ್ಮ ಜಿಲ್ಲೆಯ ಹಿರಿಯ ನಾಯಕಿಯಾಗಿದ್ದು, ಅವರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಸಮಸ್ಯೆ ಪರಿಹಾರಕ್ಕೆ ಮಂತ್ರಿ ಮಾಡಿ: ಚಿಕ್ಕಮಗಳೂರು ಜಿಲ್ಲೆಯು ಮಲೆನಾಡು, ಬಯಲುಸೀಮೆಯನ್ನು ಒಳಗೊಂಡಿದ್ದು, ಇಲ್ಲಿನ ಮೂಡಿಗೆರೆ ಮತ್ತು ಶೃಂಗೇರಿ ತಾಲೂಕುಗಳಲ್ಲಿ ಭೂ ರಹಿತ ದಲಿತರ ಸಮಸ್ಯೆ, ಭೂ ಒತ್ತುವರಿ, ಕಾಫಿ, ಅಡಿಕೆ, ನಿವೇಶನ ರಹಿತ ಕೂಲಿ ಕಾರ್ಮಿಕರ ಸಮಸ್ಯೆಗಳ ಜತೆಗೆ ನಕ್ಸಲ್ ಸಮಸ್ಯೆ ಈ ಭಾಗದಲ್ಲಿ ಕಾಡುತ್ತಿದೆ.
ಈ ಎಲ್ಲಾ ಸಮಸ್ಯೆಗಳ ಬಗ್ಗೆ ಸಂಪೂರ್ಣ ಅರಿವಿರುವ ಮೋಟಮ್ಮ ಅವರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿರುವ ಪ್ರತಿಭಟನಾಕಾರರು, ಇದರಿಂದ ಸಾಮಾಜಿಕ ನ್ಯಾಯವನ್ನು ಒದಗಿಸಿದಂತಾಗುತ್ತದೆ ಎಂದು ಹೇಳಿದ್ದಾರೆ.
ಪ್ರತಿಭಟನೆಯಲ್ಲಿ ದಲಿತ ಮುಖಂಡರಾದ ವೈ.ಎಂ. ಹೊನ್ನಪ್ಪ, ಕೃಷ್ಣಕುಮಾರ್, ಇ.ಬಿ. ದೇವರಾಜ್ ಹಾಗೂ ದಲಿತ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

