ಹೆಚ್ಚು ಶುಲ್ಕ ಪಡೆದರೆ ಕ್ರಿಮಿನಲ್ ಕೇಸ್
ಶಿವಮೊಗ್ಗ: ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿನ ಸೇವಾ ಕೇಂದ್ರಗಳಲ್ಲಿ ಹೊಸದಾಗಿ ಪಡಿತರ ಚೀಟಿ ಹಾಗೂ 2010ರ ಪೂರ್ವದಲ್ಲಿ ಕೋಮ್ಯಾಟ್ ಏಜೆನ್ಸಿ ನೀಡಿದ ಕಾಯಂ ಪಡಿತರ ಚೀಟಿಗಳಿಗೆ ಆನ್ ಲೈನ್ ಬಯೋವುಟ್ರಿಕ್ ನೀಡುವಾಗ ಅರ್ಜಿದಾರರಿಂದ ಸರ್ಕಾರ ನಿಗದಿ ಪಡಿಸಿದ 50ಕ್ಕಿಂತ ಹೆಚ್ಚುವರಿ ಹಣ ವಸೂಲಿ ಮಾಡಿದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದೆಂದು ಸಹಾಯಕ ನಿರ್ದೇಶಕರು ಎಚ್ಚರಿಸಿದ್ದಾರೆ.
ಸೇವಾ ಕೇಂದ್ರಗಳಲ್ಲಿ ಅರ್ಜಿದಾರರಿಂದ ಸರ್ಕಾರ ನಿಗದಿಪಡಿಸಿದ 50 ರು. ಗಿಂತ ಹೆಚ್ಚು ಹಣವನ್ನು ಸೇವಾ ಕೇಂದ್ರದ ಮಾಲೀಕರು ವಸೂಲಿ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪಡಿತರ ಚೀಟಿಗಾಗಿ ಫೋಟೋ ತೆಗೆಸಲು ಬಂದ ಅರ್ಜಿದಾರರಿಂದ ನಿಗದಿತ ದರಕ್ಕಿಂತ ಹೆಚ್ಚು ಹಣ ಕೇಳಿದಲ್ಲಿ ಅರ್ಜಿದಾರರು ಲಿಖಿತ ದೂರನ್ನು ಪಡಿತರ ಪ್ರದೇಶ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಉಪನಿರ್ದೇಶಕರ ಕಚೇರಿಗೆ ಸಲ್ಲಿಸಲು ತಿಳಿಸಿದ್ದಾರೆ. ದೂ.ಸಂ.9900225005.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

