ಚಿಕ್ಕಮಗಳೂರು

ಹರಕೆ ತೀರಿಸುತ್ತಿರುವ ಸಿದ್ದು ಅಭಿಮಾನಿಗಳು

Published On :

ಕ.ಪ್ರ.ವಾರ್ತೆ ಟಿ ತರೀಕೆರೆ ಟಿ  ಮೇ 23
ಎಸ್. ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಾಗಬೇಕೆಂಬ ಹರಕೆ ತೀರಿಸುವ ಹಿನ್ನಲೆಯಲ್ಲಿ ಬೆಳಗಾವಿಯ ಕರ್ನಾಟಕ
ಪ್ರದೇಶ ಕುರುಬರ ಸಂಘದ ಉಪಾಧ್ಯಕ್ಷ ಅಶೋಕ್ ಎಸ್. ಬಣಗೆ ಅವರ ನೇತೃತ್ವದಲ್ಲಿ 11 ಜನರ ಸಿದ್ದರಾಮಯ್ಯ ಅವರ ಅಭಿಮಾನಿ ತಂಡದವರು ಬೆಳಗಾವಿಯಿಂದ ಚಾಮುಂಡಿಬೆಟ್ಟದವರೆಗೆ ಹದಿನಾರು ದಿವಸಗಳ ವರೆಗೆ ಪಾದಯಾತ್ರೆ ಕೈಗೊಂಡಿದ್ದಾರೆ.
ಆ ಮಾರ್ಗದಲ್ಲಿ ತರೀಕೆರೆ ಸಾಲುಮರದಮ್ಮನವರ ದೇವಸ್ಥಾನದಲ್ಲಿ ಶಾಸಕ ಜಿ.ಎಚ್. ಶ್ರೀನಿವಾಸ್, ಪುರಸಭೆ ಸದಸ್ಯ ಧರ್ಮರಾಜ್, ಯುವ ಮುಖಂಡರಾದ ಮೋಹನ್ ಕುಮಾರ್, ಸಾಲುಮರದಮ್ಮನವರ ದೇವಸ್ಥಾನ ಸಮಿತಿ ಅಧ್ಯಕ್ಷ ಎಂ. ಮಂಜುನಾಥ್ ಮತ್ತಿತರರು ಸ್ವಾಗತಿಸಿದರು.
ಶಾಸಕ ಜಿ.ಎಚ್. ಶ್ರೀನಿವಾಸ್ ಅವರು ಸಿ.ಎಂ.ಎಸ್. ಸಿದ್ದರಾಮಯ್ಯ ಅವರ ಅಭಿಮಾನಿಗಳಿಗೆ ಹರಕೆ ತೀರಿಸುವ ಪಾದಯಾತ್ರೆ ಯಶಸ್ವಿಯಾಗಲಿ ಎಂದು ಶುಭ ಕೋರಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.