ಚಿಕ್ಕಮಗಳೂರು

ಪ್ರತಿಭಾ ಪ್ರದರ್ಶನಕ್ಕೆ ಶಿಬಿರಗಳು ಸಹಕಾರಿ

Published On :

ಕಪ್ರವಾರ್ತೆ,ಚಿಕ್ಕಮಗಳೂರು,ಮೇ25
ಬೇಸಿಗೆ ಶಿಬಿರಗಳು ಮಕ್ಕಳಲ್ಲಿರುವ ಸೂಕ್ತ ಪ್ರತಿಭೆಯನ್ನು ಹೊರಹೊಮ್ಮಿಸಲು ಹಾಗೂ ಪಠ್ಯೇತರ ಚಟುವಟಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಸಹಕಾರಿಯಾಗುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವದ ಬೆಳವಣಿಗೆ ಪೂರಕವಾಗಲಿವೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಹೇಳಿದ್ದಾರೆ.
 ನಗರಸಭೆ ಆವರಣದಲ್ಲಿರುವ ಬಾಲಭವನದಲ್ಲಿ ರಾಜ್ಯ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಬೇಸಿಗೆ ಶಿಬಿರವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
 ವಿದ್ಯಾರ್ಥಿಗಳು ಶಾಲಾ ರಜಾ ಅವಧಿಗಳಲ್ಲಿ ವಿದ್ಯಾಭ್ಯಾಸದ ಕಡೆ ಗಮನ ಹರಿಸದೆ ಆಟ ಮತ್ತಿತರೆ ಕೆಲಸಗಳಲ್ಲಿ ಕಾಲಹರಣದಿಂದ ಶಿಕ್ಷಣದಿಂದ ದೂರ ಉಳಿದಂತಾಗುತ್ತದೆ. ಆದರೆ, ಬೇಸಿಗೆ ಶಿಬಿರಗಳಲ್ಲಿ ಭಾಗವಹಿಸುವುದರಿಂದ ವಿದ್ಯಾಭ್ಯಾಸ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಲು ಸಾಧ್ಯವಾಗುತ್ತದೆ ಎಂದರು.
 ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ. ಶಿವಶಂಕರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೇಸಿಗೆ ಶಿಬಿರದಲ್ಲಿ ಮಕ್ಕಳು ಭಾಗವಹಿಸುವುದರಿಂದ ಅವರ ಆತ್ಮವಿಶ್ವಾಸ, ಮುಂದಾಳತ್ವ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಅನುಕೂಲವಾಗುತ್ತದೆ ಎಂದರು.
 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಚಂದ್ರಶೇಖರಯ್ಯ ಸ್ವಾಗತಿಸಿದರು. ಶಿಶುಅಭಿವೃದ್ಧಿ ಯೋಜನಾಧಿಕಾರಿ ಎಸ್.ಆರ್. ವೆಂಕಟೇಶ್ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.