ಚಿಕ್ಕಮಗಳೂರು

ಔಷಧಿ ಮಳಿಗೆ ಪರವಾನಗಿ ನವೀಕರಣಕ್ಕೆ ವಿರೋಧ

Published On :

ಕ.ಪ್ರ.ವಾರ್ತೆ, ಮೂಡಿಗೆರೆ, ಮೇ 25
ಸರ್ಕಾರದ ಆದೇಶ ಉಲ್ಲಂಘಿಸಿ ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿಯ ಸ್ವಯಂವೇದ್ಯ  ತೀರ್ಮಾನದಂತೆ ಮೂಡಿಗೆರೆ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಟಿಎಪಿಸಿಎಂಎಸ್ ಸಹಕಾರಿ ಔಷಧಿ ಮಳಿಗೆ ಅನುಮತಿ ಪುನರ್ ನವೀಕರಣ ನಡೆಸಲಾಗಿದೆ ಎಂದು ಮುಸ್ಲಿಂ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಕಿರುಗುಂದ ಅಬ್ಬಾಸ್ ಆರೋಪಿಸಿದ್ದಾರೆ.
   ಅವರು ಶನಿವಾರ ಈ ಕುರಿತು ದಾಖಲೆಗಳ ಸಹಿತ ಹೇಳಿಕೆ ನೀಡಿದ್ದು, ಸರ್ಕಾರದ ಸುತ್ತೋಲೆಯಂತೆ ಸರ್ಕಾರಿ ಆಸ್ಪತ್ರೆ ಆವರಣದೊಳಗೆ ಟಿಎಪಿಸಿಎಂಎಸ್ ಸೇರಿದಂತೆ ಯಾವುದೇ ಔಷಧಿ ಅಂಗಡಿಗಳ ಪರವಾನಗಿ ನವೀಕರಣ ನಿಷೇಧಿಸಿದೆ. ಸುತ್ತೋಲೆಯ ಪ್ರಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಜನರಿಕ್ ಔಷಧಿಗಳನ್ನು ಪೂರೈಸುತ್ತಿದ್ದು, ರೋಗಿಗಳಿಗೆ ಉಚಿತವಾಗಿ ಪೂರೈಸುವುದು ಸರ್ಕಾರದ ಧ್ಯೇಯವಾಗಿದೆ ಎಂದಿದ್ದಾರೆ.
ಅನುಮತಿ ನಿಷೇಧ: ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಔಷಧಿಗಳನ್ನು ಹೊರಗಿನಿಂದ ತರಲು ಚೀಟಿ ಬರೆದು ಕೊಡುವುದನ್ನು  ನಿಷೇಧಿಸಿದ್ದನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪುಷ್ಟೀಕರಿಸಿದೆ. ಆರೋಗ್ಯ ಇಲಾಖೆ ವ್ಯಾಪ್ತಿಗೊಳಪಟ್ಟಿರುವ ಯಾವುದೇ ಆಸ್ಪತ್ರೆ ಆವರಣಗಳಲ್ಲಿ ಆಯುಕ್ತರ ಮಟ್ಟದಲ್ಲಿ, ಜಿಲ್ಲಾಧಿಕಾರಿಗಳ ಮಟ್ಟದಲ್ಲಿ, ಜಿಲ್ಲಾಮಟ್ಟದಲ್ಲಿ ತಾಲೂಕು ಮಟ್ಟದಲ್ಲಿ, ಅಥವಾ ಆರೋಗ್ಯ ರಕ್ಷಾ ಸಮಿತಿ ಮಟ್ಟದಲ್ಲಿ ಖಾಸಗಿ ಔಷಧಿ ಅಂಗಡಿ ತೆರೆಯಲು ಅನುಮತಿ ನೀಡುವುದನ್ನು ಸಂಪೂರ್ಣ ನಿಷೇಧಿಸಿರುವ ದಾಖಲೆಗಳಿವೆ ಎಂದರು.
  ಆದರೆ ಮೂಡಿಗೆರೆ ಶಾಸಕರು ಬರೆದಿರುವ ಪತ್ರವನ್ನೇ ಆಧಾರವಾಗಿ ಬಳಸಿಕೊಂಡಿರುವ ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿಯು, ಅವಧಿ ಪೂರ್ಣಗೊಂಡ ಔಷಧಿ ಅಂಗಡಿಯನ್ನು ಮುಂದುವರಿಸಲು ಆ.8ರಂದು ನಡೆದ ಸಮಿತಿ ಸಭೆಯಲ್ಲಿ ಅನುಮತಿ ನೀಡುವ ತೀರ್ಮಾನ ಕೈಗೊಂಡಿರುವುದು ಸರ್ಕಾರಿ ಆದೇಶದ ಸ್ಪಷ್ಟ ಉಲ್ಲಂಘನೆ ಯಾಗಿದೆ. ಆದ್ದರಿಂದ ಸಂಬಂಧಿಸಿದ ಇಲಾಖೆಯ ಹಿರಿಯ ಅಧಿಕಾರಿಗಳು ತಕ್ಷಣ ಕೂಲಂಕಷ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.