ಡೊನೇಷನ್ ಹಾವಳಿ ತಡೆಗೆ ಸೂಚನೆ
ಕಪ್ರ ವಾರ್ತ್ಣೆ ಚಿಕ್ಕಮಗಳೂರು ಮೇ 25
ಜಿಲ್ಲೆಯಲ್ಲಿ ಡೊನೇಷನ್ ಹಾವಳಿ ಕಂಡು ಬರುತ್ತಿದ್ದು, ಶಿಕ್ಷಣ ಸಂಸ್ಥೆಗಳು ಶಿಕ್ಷಣವನ್ನು ವ್ಯಾಪರೀಕರಣಗೊಳಿಸದಂತೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಜಿಪಂ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಸೂಚನೆ ನೀಡಿದ್ದಾರೆ.
ಜಿಪಂ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಸರ್ವಶಿಕ್ಷಣ ಅಭಿಯಾನದ ಜಿಲ್ಲಾ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಹೊಸದಾಗಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಂದ ಡೊನೇಷನ್ ಪಡೆಯುವುದು ಕಂಡುಬರುತ್ತಿರುವುದರ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಕ್ರಮವಹಿಸುವುದರ ಬಗ್ಗೆ ಮಾಹಿತಿ ಪಡೆದು ಮಾತನಾಡಿದ ಅವರು, ಶಿಕ್ಷಣ ಸಂಸ್ಥೆಗಳು ಕಾನೂನು ಬದ್ದವಾಗಿ ನಿಗದಿಪಡಿಸಿರುವ ಶುಲ್ಕವನ್ನು ಮಾತ್ರ ತೆಗೆದುಕೊಳ್ಳಲು ಅವಕಾಶ ನೀಡಬೇಕು ಇಲ್ಲವಾದಲ್ಲಿ ಅಂತಹ ಸಂಸ್ಥೆಗಳ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ತಿಳಿಸಿದರು.
ಶಿಕ್ಷಕರ ಜವಬ್ದಾರಿ: ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಅನುದಾನ ನಿಡುತ್ತಿದ್ದು ಅದರ ಸದ್ಬಳಕೆ ಕೇವಲ ಲೆಕ್ಕಪತ್ರಗಳನ್ನು ನೋಡುವುದರಿಂದ ಗೊತ್ತಾಗುವುದಿಲ್ಲ. ಆದರೆ, ಫಲಿತಾಂಶದಿಂದಗೊತ್ತಾಗುತ್ತದೆ ಎಂದ ಅವರು, ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉತ್ತಮವಾಗಿ ಕನ್ನಡ ಓದಲು, ಬರೆಯಲು ಬರುವ ಹಾಗೆ ಎಚ್ಚರ ವಹಿಸುವುದು ಶಿಕ್ಷಕರ ಜವಬ್ದಾರಿಯಾಗಿದೆ. ಈ ಬಗ್ಗೆ ಮೇಲ್ವಿಚಾರಕರು ಪರಿಶೀಲಿಸಬೇಕೆಂದರು. ಸ್ಥಾಯಿ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ, ಆನಂದಪ್ಪ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಶಂಕರ್, ಟಿ.ಆರ್. ವಿಶಾಲ ಹಾಗೂ ರವೀಂದ್ರಕುಕ್ಕುಡಿಗೆ, ಟೌನ್ ಮಹಿಳಾ ಸಮಾಜ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಗೀತಾ ಎಂ.ಎಲ್. ಮೂರ್ತಿ, ನಿವೃತ್ತ ಮುಖ್ಯ ಶಿಕ್ಷಕಿ ನೀಲಾಂಭಿಕೆ ಉಪಸ್ಥಿತರಿದ್ದರು.
ಸಾ.ಶಿ.ಇಲಾಖೆಯ ಉಪ ನಿರ್ದೇಶಕ ವಿ.ಎಂ. ಕಾಂತರಾಜ್ ಸ್ವಾಗತಿಸಿದರು, ಡಯಟ್ ಉಪ ನಿರ್ದೇಶಕ ಬಸವೇಗೌಡ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

