ಭ್ರಷ್ಟಾಚಾರ ರಹಿತ ಆಡಳಿತ ಪಕ್ಷದ ಗುರಿ
ಚಿಕ್ಕಮಗಳೂರು: ಭ್ರಷ್ಟಾಚಾರ ರಹಿತ ಆಡಳಿತ ನೀಡುವುದೇ ಕಾಂಗ್ರೆಸ್ನ ಮೂಲ ಗುರಿ ಎಂದು ರಾಜ್ಯದ ಗೃಹ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
ಈ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ಕಂಡು ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದಾರೆ. ಇದೀಗ ಕಾಂಗ್ರೆಸ್ ಬಿಜೆಪಿಯ ದಾರಿಯಲ್ಲಿ ಸಾಗಿದರೆ ಅರ್ಥ ಇರುವುದಿಲ್ಲ. ಅದುದರಿಂದ ಕರ್ನಾಟಕ ರಾಜ್ಯದಲ್ಲಿ ಪಾರದರ್ಶಕ, ಶುದ್ದ ಆಡಳಿತ ನೀಡಬೇಕು ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿಯವರು ಕರೆ ನೀಡಿದ್ದಾರೆ. ಇದನ್ನು ಯಾರೂ ಕೂಡ ಮರೆಯಬಾರದು ಎಂದು ಭಾನುವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಕಿವಿ ಮಾತು ಹೇಳಿದರು. ರಾಜಕೀಯ ಪಕ್ಷಕ್ಕೆ ಅಧಿಕಾರ ಮಾತ್ರ ಗುರಿ ಆಗಬಾರದು. ಹಾಗೆನಾದರೂ ಅಂದುಕೊಂಡಿದ್ದೆಯಾದಲ್ಲಿ ಪಕ್ಷ ಕಟ್ಟಲು ಸಾಧ್ಯವಿಲ್ಲ. ಕಾಂಗ್ರೆಸ್ನಲ್ಲಿ ನಾಯಕರ ಕೊರತೆ ಇಲ್ಲ. ಬಿಜೆಪಿಯ ದುರಾಡಳಿತ ನೋಡಿ ಜನ ಬೇಸತ್ತ ಕಾಂಗ್ರೆಸ್ಗೆ ಮತ ನೀಡಿದ್ದಾರೆ. ಪಕ್ಷ ಅಧಿಕಾರಕ್ಕೆ ಬರಲು ಕಾರ್ಯಕರ್ತರೇ ಕಾರಣ ಎಂದರು. ಪಕ್ಷಕ್ಕೆ ಸಾಮಾನ್ಯ ಕಾರ್ಯಕರ್ತರನ್ನಾಗಿ ಬಂದೆ, ಶಾಸಕನಾಗಿ, ಮಂತ್ರಿಯಾಗುವ ಕನಸು ಕಂಡಿರಲಿಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

