ಚಿಕ್ಕಮಗಳೂರು

ಚಂದ್ರಪ್ಪಗೆ ಸಚಿವ ಸ್ಥಾನ ನೀಡಲು ದಸಂಸ ಆಗ್ರಹ

Published On :

ಕ.ಪ್ರ.ವಾರ್ತೆ, ಕಡೂರು, ಮೇ 26 ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಲವೇ ಮತಗಳ ಅಂತರದಲ್ಲಿ ಸೋತಿದ್ದ ಮೂಡಿಗೆರೆಯ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪನವರಿಗೆ ಎಂ.ಎಲ್.ಸಿ. ಅಥವಾ ಸಚಿವಗಿರಿ ನೀಡುವಂತೆ ದಸಂಸ ಜಿಲ್ಲಾ ವಿಭಾಗೀಯ ಸಂಚಾಲಕ ಮಂಜಪ್ಪ ಆಗ್ರಹಿಸಿದ್ದಾರೆ.      
  ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡೀರುವ ಅವರು, ಕಳೆದ 30 ವರ್ಷದಿಂದ ಕಾಂಗ್ರೆಸ್ ಕಟ್ಟಾಳಿನಂತೆ ದುಡಿಯುತ್ತಿರುವ ಚಂದ್ರಪ್ಪನವರಿಗೆ ಈ ಬಾರಿ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದ್ದು ಆದರೆ ಕೇವಲ 635 ಮತಗಳ ಅಂತರದಿಂದ ಸೋಲು ಅನುಭವಿಸಿದರು.   ಕೆಲ ಸ್ವಾರ್ಥ ರಾಜಕಾರಣಿಗಳು ಅವರ ಸೋಲಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿ, ಸಜ್ಜನ ರಾಜಕಾರಣಿಯಾಗಿರುವ ಬಿ.ಎನ್. ಚಂದ್ರಪ್ಪನವರು ಎಲ್ಲ ವರ್ಗದ ಪ್ರೀತಿಗೆ ಪಾತ್ರರಾಗದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಸೇವೆ ಮಾಡುವ ಉದ್ದೇಶದಿಂದ ಕಾಂಗ್ರೆಸ್ ಹೈಕಮಾಂಡ್ ಚಂದ್ರಪ್ಪನವರ ಸೇವೆ ಗುರುತಿಸಿ ಸಚಿವಗಿರಿ ಅಥವಾ ಎಂ. ಎಲ್.ಸಿ. ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.