ಮೂಡಿಗೆರೆಯಲ್ಲಿ ಕಾಂಗ್ರೆಸ್ಗೆ ನೈತಿಕ ಜಯ: ಚಂದ್ರಪ್ಪ
ಮೂಡಿಗೆರೆ: ಕ್ಷೇತ್ರದಲ್ಲಿ ಕಾಂಗ್ರೆಸ್ ನೈತಿಕ ಜಯ ಸಾಧಿಸಿದೆ ಎಂದು ಕಾಂಗ್ರೆಸ್ನಿಂದ ಸ್ಪಧಿಸಿ ಸೋತ ಬಿ.ಎನ್.ಚಂದ್ರಪ್ಪ ತಿಳಿಸಿದರು.
ಪತ್ರಿಕಾ ಭವನದಲ್ಲಿ ನಡೆದ ಸುದ್ಧಿ ಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು. ಮೂಡಿಗೆರೆ ಕ್ಷೇತ್ರದಲ್ಲಿ ಹತ್ತು ಹಲವು ಸಮಸ್ಯೆಗಳು ಕಾಡುತ್ತಿದ್ದು. ಆ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ತಿಳಿಸಿದರು. ತಾವು ಈ ಬಾರಿ ಗೆಲುವು ಸಾಧಿಸಿದ್ದರೆ. ಕ್ಷೇತ್ರದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದರೊಂದಿಗೆ ಸಮಸ್ಯೆಗಳಿಗೆ ಸ್ಪಂದಿಸುವ ಆಶಯವಿತ್ತು ಎಂದರು.
ದ್ರೋಹ ಮಾಡಲಾರೆ: ಕ್ಷೇತ್ರದ ಜನತೆ ನನ್ನನ್ನು ಕೈಬಿಟ್ಟಿಲ್ಲ. ಮತ ಹಾಕಿದ ಜನರಿಗೆ ನಾನೆಂದು ದ್ರೋಹ ಬಗೆಯುವುದಿಲ್ಲ. ಸೋಲು ಗೆಲುವು ರಾಜಕೀಯದಲ್ಲಿ ಇದ್ದದ್ದೆ. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿದ್ದು. ಕ್ಷೇತ್ರದ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರದ ಗಮನಕ್ಕೆ ತರುವುದಾಗಿ ತಿಳಿಸಿದರು.
ತಾಲೂಕು ಕೇಂದ್ರದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು. ಬಡವರು ಪರೆದಾಡುತ್ತಿರುವ ವಿಚಾರ ತಮ್ಮ ಗಮನಕ್ಕೆ ಬಂದಿದ್ದು. ಒತ್ತುವರೀ ಭೂಮಿ ಸಮಸ್ಯೆ, ಕುಡಿಯುವ ನೀರು ಸಮಸ್ಯೆ ಸೇರಿದಂತೆ ಇನ್ನು ಅನೇಕ ಸಮಸ್ಯೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನದಟ್ಟು ಮಾಡುವುದರ ಮೂಲಕ ಸಮಸ್ಯೆ ಬಗೆಹರಿಸಲು ವೈದ್ಯರ ನೇಮಕಕ್ಕೆ ವಿಶೇಷ ಕಾಳಜಿ ವಹಿಸುವುದಾಗಿ ಹೇಳಿದರು.
ಆದೇಶ ಉಲ್ಲಂಘನೆ: ನಂತರ ಗಂಗನಮಕ್ಕಿಯಲ್ಲಿ ನಡೆಯುತ್ತಿರುವ ಕಾಂಕ್ರೀಟ್ ರಸ್ತೆ ಪರಿಶೀಲನೆ ನಡೆಸಿ. ಭಾರಿ ವಾಹನಗಳ ಓಡಾಟಕ್ಕೆ ಜಿಲ್ಲಾಧಿಕಾರಿಗಳು ನಿರ್ಬಂಧ ಹೇರಿದ್ದರು. ಜಿಲ್ಲಾಧಿಕಾರಿಗಳ ಆದೇಶವನ್ನು ಉಲ್ಲಂಘನೆ ಮಾಡಿ ಲಾರಿಗಳು ಓಡಾಟ ನಡೆಸುತ್ತಿವೆ. ಆದೇಶ ಉಲ್ಲಂಘನೆ ಮಾಡಿರುವ ಅಧಿಕಾರಿಗಳ ವಿರುದ್ದ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿಗಳ ಗಮನಕ್ಕೆ ತರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಪಿ.ಮನು, ಕೆಪಿಸಿಸಿ ಕಾರ್ಯದರ್ಶಿ ಜಿ.ಎಚ್.ಹಾಲಪ್ಪಗೌಡ, ವಿ.ಕೆ.ಚಂದ್ರೇಗೌಡ, ಇಂತಿಯಾಜ್, ಮೊಹಿದ್ದೀನ್ ಶೇಠ್, ಮೆಣಸೇಗೌಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

