ಚಿಕ್ಕಮಗಳೂರು

ವಿದ್ಯುತ್ ಕಂಬಗಳ ಸ್ಥಳಾಂತರಕ್ಕೆ ಅನುದಾನ

Published On :

ತರೀಕೆರೆ: ಪಟ್ಟಣ ವ್ಯಾಪ್ತಿಯ ರಾ.ಹೆದ್ದಾರಿ ಬಿ.ಎಚ್. ರಸ್ತೆಯ ವಿದ್ಯತ್ ಕಂಬಗಳ ಸ್ಥಳಾಂತರಕ್ಕೆ ಸಂಸದರ ನಿಧಿಯಿಂದ ಅನುದಾನ ನೀಡಲಾಗುವುದು ಎಂದು ಸಂಸದ ಜಯಪ್ರಕಾಶ್ ಹೆಗಡೆ ತಿಳಿಸಿದ್ದಾರೆ.
 ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಟ್ಟಣ ವ್ಯಾಪ್ತಿಯ ರಾ.ಹೆ.ಬಿ.ಎಚ್. ರಸ್ತೆಯ ಅಭಿವೃದ್ಧಿ ವಿಚಾರದಲ್ಲಿ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಮೊದಲು ವಿದ್ಯುತ್ ಕಂಬಗಳು ಸ್ಥಳಾಂತರವಾಗಬೇಕು, ಈ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳ ಸ್ಥಳಾಂತರಕ್ಕೆ ಸಂಸದರ ನಿಧಿಯಿಂದ ಆರ್ಥಿಕ ನೆರವು ನೀಡಲು ತಾವು ಜಿಲ್ಲಾಧಿಕಾರಿಗೆ ಪತ್ರ ಬರೆಯುವುದಾಗಿ ತಿಳಿಸಿದ ಅವರು ಮೆಸ್ಕಾಂ ಅಧಿಕಾರಿಗಳು
ಪುರಸಭೆ ಮುಖ್ಯಾಧಿಕಾರಿಗಳೊಡನೆ ದೂರವಾಣಿಯಲ್ಲಿ ಮಾತನಾಡಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಕಡೂರಿನಿಂದ ಭದ್ರಾವತಿ ವರೆಗೂ ರಾ.ಹೆ.ಪೂರ್ಣ ಪ್ರಮಾಣದಲ್ಲಿ ಅಬಿವೃದ್ಧಿಯಾಗಬೇಕು ಎಂದು ಅವರು ಇದೇ ಸಂದರ್ಬದಲ್ಲಿ ತಿಳಿಸಿದರು.
ಭೇಟಿ: ಸಂಸತ್ ಕ್ಷೇತ್ರದ ವ್ಯಾಪ್ತಿಯ ಶೇ.90ರಷ್ಟು ಗ್ರಾಮೀಣ ಭಾಗಗಳಿಗೆ ಭೇಟಿ ನೀಡಲಾಗಿದೆ. ಮತ ವಿಭಜನೆಯಿಂದಾಗಿ ಜಿಲ್ಲೆಯಲ್ಲಿ ಪಕ್ಷಕ್ಕೆ ಸೋಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆ ವಿಚಾರ ಕುರಿತು ರೈತರನ್ನು ಒಳಗೊಂಡಂತೆ, ಜಲಸಂಪನ್ಮೂಲ ಸಚಿವರು, ಶಾಸಕರು ಮತ್ತು ರೈತರ ಸಭೆ ಕರೆದು ವಿವರವಾಗಿ ಚರ್ಚಿಸಲಾಗುವುದು ಎಂದು ತಿಳಿಸಿದರು.
 ನೂತನ ಶಾಸಕ ಜಿ.ಎಚ್. ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಘನಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಖಚಾಂಚಿ ಬಿ.ಎಸ್.ಆರ್. ಮಂಜುನಾಥ್, ಸಮೀವುಲ್ಲ, ದೋರನಾಳು ಪರಮೇಶ್, ಟಿ.ಎಸ್. ಧರ್ಮರಾಜ್, ಪದ್ಮರಾಜ್ ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.