3 ದಿನಕ್ಕೊಮ್ಮೆ ನೀರು
ಚಿಕ್ಕಮಗಳೂರು: ಚಿಕ್ಕಮಗಳೂರು ನಗರಕ್ಕೆ ನೀರು ಸರಬರಾಜಾಗುತ್ತಿರುವ ಹಿರೇಕೊಳಲೆ ಕೆರೆಯಲ್ಲಿ ನೀರು ಸಂಪೂರ್ರ್ಣವಾಗಿ ಖಾಲಿಯಾಗಿರುವುದರಿಂದ ನಗರದ ಎಲ್ಲಾ ವಾರ್ಡ್ಗಳಿಗೂ ಯಗಚಿ ಜಲಾಶಯದಿಂದ ನೀರನ್ನು ಒದಗಿಸಬೇಕಾಗಿರುವುದರಿಂದ ಹಾಗೂ ನಗರಕ್ಕೆ ಸರಬರಾಜಾಗುವ ನೀರಿನಲ್ಲಿ ಕೊರತೆ ಉಂಟಾಗಿರುವುದರಿಂದ ನಗರದ ಎಲ್ಲಾ ವಾರ್ಡ್ಗಳಿಗೆ 3 ದಿನಗಳಿಗೊಮ್ಮೆ ನೀರನ್ನು ಒದಗಿಸಲಾಗುವುದು. ಸಾರ್ವಜನಿಕರು ನೀರನ್ನು ಮಿತವಾಗಿ ಬಳಸುವುದಲ್ಲದೇ, ನೀರು ಸರಬರಾಜಿನಲ್ಲಿ ಉಂಟಾಗುವ ವ್ಯತ್ಯಯಗಳಿಗೆ ನಗರಸಭೆಯೊಂದಿಗೆ ಸಹಕರಿಸಲು ಪೌರಾಯುಕ್ತರು ತಿಳಿಸಿದ್ದಾರೆ.
ಅರ್ಜಿ ಆಹ್ವಾನ
ಸಾರ್ವಜನಿಕ ಶಿಕ್ಷಣ ಇಲಾಖೆಯು 2013-14 ನೇ ಸಾಲಿಗೆ ಶಾಲೆಯಿಂದ ಹೊರಗುಳಿದ ಮಕ್ಕಳ ಕಾರ್ಯಕ್ರಮ ಅನುಷ್ಠಾನಗೊಳಿಸಲು ಸರ್ಕಾರೇತರ ಸಂಘ ಸಂಸ್ಥೆಗಳಿಂದ (ಎನ್.ಜಿ.ಓ) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 3 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಸರ್ವ ಶಿಕ್ಷಣ ಅಭಿಯಾನ, ಸಾರ್ವಜನಿಕ ಶಿಕ್ಷಣ ಇಲಾಖೆ, ಚಿಕ್ಕಮಗಳೂರು ಇವರನ್ನು ಸಂಪರ್ಕಿಸಬಹುದು.
ದುರ್ಗಾಪರಮೇಶ್ವರಿ ದೇವಿ ಪ್ರತಿಷ್ಠಾಪನೆ
ಮೂಡಿಗೆರೆ: ತಾಲೂಕಿನ ಬಿದರಹಳ್ಳಿಯಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಿಯ ವಿಗ್ರಹವು ಮೇ 30ರ ಬೆಳಗ್ಗೆ 8.30ರಿಂದ 9.30ರ ವರೆಗೆ ನಿಥುನ ಲಗ್ನದಲ್ಲಿ ಪುನರ್ ಪ್ರತಿಷ್ಠಾಪನೆ ಮಾಡಲಾಗುವುದು. ಮಧ್ಯಾಹ್ನ ದೇವಿ ದರ್ಶನ ನಡೆಯಲಿದ್ದು, ಅನ್ನ ಸಂತರ್ಪಣೆ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವಿಯ ಕೃಪೆಗೆ ಪಾತ್ರರಾಗುವಂತೆ ಶ್ರೀ ದುರ್ಗಾ ಪರಮೇಶ್ವರಿ ಸೇವಾ ಸಮಿತಿ ಮನವಿ ಮಾಡಿದ್ದಾರೆ.
ಚೆಸ್ ಕೋರ್ಸ್
ಶಿವಮೊಗ್ಗ: ನಳಂದ ಚೆಸ್ ಅಕಾಡೆಮಿ ಒಂದು ವರ್ಷದ ಚೆಸ್ ಕೋರ್ಸ್ ಮತ್ತು ಕ್ವಿಜ್ ಕ್ಲಬ್ ಆರಂಭಿಸುತ್ತಿದೆ. ಹೊಸದಾಗಿ ಚೆಸ್ ಕಲಿಯುವವರಿಗೆ ಮತ್ತು ಈಗಾಗಲೇ ಚೆಸ್ ಆಡಲು ಕಲಿತಿರುವವರಿಗೂ ಬೇರೆ ಬೇರೆ ಬ್ಯಾಚ್ಗಳಲ್ಲಿ ಹೇಳಿಕೊಡಲಾಗುತ್ತದೆ. ನಳಂದ ಕ್ವಿಜ್ ಕ್ಲಬ್ನ ತರಗತಿಗಳು ಪ್ರತಿ ಭಾನುವಾರ ನಡೆಯಲಿದೆ ಎಂದು ಅಕಾಡೆಮಿ ಕಾರ್ಯದರ್ಶಿ ಶ್ರೀಕೃಷ್ಣ ಉಡುಪ ತಿಳಿಸಿದ್ದಾರೆ. ಮಾಹಿತಿಗೆ ಮೊ- 99458 09662.
ಉಚಿತ ನೋಟ್ ಪುಸ್ತಕ ವಿತರಣೆ
ಶಿವಮೊಗ್ಗ: ಜಿಲ್ಲಾ ಮಡಿವಾಳ ಯುವ ವೇದಿಕೆ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ಹಾಗೂ ಉಚಿತ ನೋಟ್ ಪುಸ್ತಕ ವಿತರಿಸಲು ನಿರ್ಧರಿಸಿದೆ. ಆಸಕ್ತ ವಿದ್ಯಾರ್ಥಿಗಳು ವೇದಿಕೆಗೆ ಅರ್ಜಿ ಸಲ್ಲಿಸಬೇಕು. ಮೊ-94487 74552ಗೆ ಸಂಪರ್ಕಿಸಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

