ಚಿಕ್ಕಮಗಳೂರು

ಮದ್ಯ ಮಾರಾಟ ಮಳಿಗೆಗೆ ಬೆಂಕಿ: ನಷ್ಟ

Published On :

ನರಸಿಂಹರಾಜಪುರ: ಸಿನಿಮಾ ಟಾಕೀಸ್ ರಸ್ತೆಯ ಸಮೀಪದಲ್ಲಿರುವ ಸರ್ಕಾರಿ ಸ್ವಾಮ್ಯದ ಮದ್ಯ ಮಾರಾಟ ಮಳಿಗೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಬಿದ್ದು ಲಕ್ಷಾಂತರ ರು. ನಷ್ಟ ಉಂಟಾದ ಘಟನೆ ಶನಿವಾರ ರಾತ್ರಿ ನಡೆದಿದೆ.
ರಾತ್ರಿ ಸಮಯದಲ್ಲಿ ಮಳಿಗೆಯಲ್ಲಿ ಶಬ್ಧ ಬಂದಿದ್ದನ್ನು ಕೇಳಿದ ಅಕ್ಕ ಪಕ್ಕದ ಮನೆಯವರು ಭಾನುವಾರ ಬೆಳಿಗ್ಗೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಗಿಲು ತೆಗೆದು ನೋಡಿದಾಗ ಹೊಗೆ ಬರುತ್ತಿರುವುದು ಕಂಡು ಬಂದಿದೆ.
ತಕ್ಷಣ ಅಗ್ನಿ ಶ್ಯಾಮಕ ದಳ ಕರೆಸಿ ಬೆಂಕಿ ನಂದಿಸಲಾಯಿತು. ಕೆಲವು ಬಾಟಲುಗಳು ಸಂಪೂರ್ಣ ಸುಟ್ಟು ಹೋಗಿದ್ದು ಇನ್ನು ಕೆಲವು ಬಾಟಲಿಗಳಿಗೆ ಸ್ವಲ್ಪ ಹಾನಿಯಾಗಿದೆ.
ಅಬಕಾರಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ನಷ್ಟದ ಬಗ್ಗೆ ಅಂದಾಜು ಮಾಡುತ್ತಿದ್ದು 4.50 ಲಕ್ಷ ನಷ್ಟ ಉಂಟಾಗಿರಬಹುದು ಎಂದು ಅಂದಾಜಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.