'ಆರೋಗ್ಯ, ಉಲ್ಲಾಸ ಕೊಡುವ ಲಲಿತ ಕಲೆ'
ಕ.ಪ್ರ.ವಾರ್ತೆ, ಚಿಕ್ಕಮಗಳೂರು, ನ.10
ಸೃಷ್ಟಿ ಎಷ್ಟು ಪುರಾತನವೋ ಅಷ್ಟೇ ಪುರಾತನವಾದ ಲಲಿತ ಕಲೆ ಮನುಷ್ಯನಿಗೆ ಆರೋಗ್ಯ ಮತ್ತು ಉಲ್ಲಾಸ ಕೊಡಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಶ್ರೀವತ್ಸ ಹುಲ್ಸೆಯವರು ಹೇಳಿದ್ದಾರೆ.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಡೆಸುತ್ತಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಗಳ ಮಾಸಾಚರಣೆ ಅಂಗವಾಗಿ ಇಲ್ಲಿನ ಆಶಾಕಿರಣ ಅಂಧ ಮಕ್ಕಳ ಶಾಲೆಯಲ್ಲಿ ಶನಿವಾರ ಆಯೋಜಿಸಲಾಗಿದ್ದ ಬಿ.ಕೆ. ಸುಮಿತ್ರರವರ ಬದುಕು ಮತ್ತು ಸಾಧನೆ ವಿಷಯವಾಗಿ ಅವರು ಮಾತನಾಡಿದರು.
ಸುಗಮ ಸಂಗೀತದಲ್ಲಿ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಬಿ.ಕೆ. ಸುಮಿತ್ರರವರು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ
ಕುಗ್ರಾಮವಾದ ಬಿಳಾಲು ಕೊಪ್ಪದಲ್ಲಿ ಜನಿಸಿ ಬೆಳೆದವರು, ಮೈಸೂರು ವಿಶ್ವ ವಿದ್ಯಾನಿಲಯದ ಡಾಕ್ಟರೇಟ್ ಪದವಿಯ ಜೊತೆಗೆ 2013 ರಲ್ಲಿ ನಾಡೋಜ ಪ್ರಶಸ್ತಿಯನ್ನು ಮುಡಿಗೇರಿಸಿ ಕೊಂಡಿದ್ದಾರೆ ಎಂದು ಬಿ.ಕೆ. ಸುಮಿತ್ರ ಅವರ ಸಾಧನೆಯನ್ನು ವಿಸ್ತುತವಾಗಿ ವಿವರಿಸಿದರು.
ಮತ್ತೋರ್ವ ಉಪನ್ಯಾಸಕರಾದ ನೆ.ಲ. ಸುಬ್ರಮಣ್ಯರವರು ಬಿ.ಕೆ. ಸುಮಿತ್ರಾರವರಿಗೆ ಒದಗಿ ಬಂದ ಅವಕಾಶಗಳನ್ನು ವಿವರಿಸಿದರು. ಸಂಸ್ಥೆಯ ಕಾರ್ಯದರ್ಶಿ ನಸುರುಲ್ಲಾ ಶರೀಫ್ರವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಂಸ್ಥೆಯ ಅಧ್ಯಕ್ಷ ಡಾ. ಜೆ.ಪಿ. ಕೃಷ್ಣೇಗೌಡ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಬಿ.ಕೆ. ಸುಮಿತ್ರರವರ ಬದುಕು ಸಾಧನೆ ಎಲ್ಲರಿಗೂ ಮಾದರಿಯಾಗಲಿ ಎಂದರು. ವೇದಿಕೆಯಲ್ಲಿ ತಾಲೂಕು ಕಸಾಪ ಅಧ್ಯಕ್ಷ ನಟರಾಜ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

