ಪಾರ್ಕಿಂಗ್ ಅವ್ಯವಸ್ಥೆ
ಚಿಕ್ಕಮಗಳೂರು ನಗರದಲ್ಲಿ ವಾಹನಗಳ ಪಾರ್ಕಿಂಗ್ ಬಗ್ಗೆ ಪೊಲೀಸ್ ಇಲಾಖೆ ಗಮನ ಹರಿಸುತ್ತಿಲ್ಲ. ನಗರದ ಹೃದಯ ಭಾಗದಲ್ಲಿರುವ ಬಹಳಷ್ಟು ಕಲ್ಯಾಣ ಮಂಟಪಗಳು ವಾಹನಗಳ ನಿಲುಗಡೆಗೆ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಿಕೊಂಡಿಲ್ಲ. ಮದುವೆಗೆ ಬರುವವರು ರಸ್ತೆಯ ಬದಿಯಲ್ಲಿಯೇ ವಾಹನಗಳನ್ನು ನಿಲ್ಲಿಸುತ್ತಿದ್ದಾರೆ. ಇದರಿಂದ ಆ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಬಹಳಷ್ಟು ಸಂದರ್ಭದಲ್ಲಿ ಟ್ರಾಫಿಕ್ ಜಾಮ್ ಆಗಿರುತ್ತದೆ. ಈ ಬಗ್ಗೆ ಯಾರ ಬಳಿ ಹೇಳಿಕೊಳ್ಳಬೇಕೆಂಬುದು ತಿಳಿಯುತ್ತಿಲ್ಲ. ಹೇಳಿದರೂ ಅದನ್ನು ಕೇಳಿ ಸಮಸ್ಯೆಯನ್ನು ಬಗೆಹರಿಸುವ ಮನಸ್ಥಿತಿಯಲ್ಲಿ ಸಂಬಂಧಪಟ್ಟ ಕಲ್ಯಾಣ ಮಂಟಪದವರು ಇಲ್ಲ.
ಕಲ್ಯಾಣ ಮಂಟಪ ನಿರ್ಮಾಣಕ್ಕೆ ಅನುಮತಿ ನೀಡುವಾಗ ವಾಹನಗಳ ಪಾರ್ಕಿಂಗ್ಗೆ ವ್ಯವಸ್ಥೆ ಮಾಡಿಕೊಂಡಿರುವ ಬಗ್ಗೆ ಸಂಬಂಧಪಟ್ಟ ಕಲ್ಯಾಣ ಮಂಟಪದವರು ಮಾಹಿತಿಯನ್ನು ನಗರಸಭೆಗೆ ನೀಡಬೇಕು. ಆದರೆ, ಈ ಹಿಂದೆ ಮಾಹಿತಿಯನ್ನು ಕೇಳುವ ಮತ್ತು ಕೊಡುವ ಕೆಲಸ ನಡೆದಿಲ್ಲ ಎಂಬುದು ಇದರಿಂದ ತಿಳಿಯುತ್ತದೆ. ನಗರಸಭೆಯವರು ಕಟ್ಟಡ ನಿರ್ಮಾಣದ ಪರವಾನಗಿ ನೀಡುವ ಸಂದರ್ಭದಲ್ಲಿ ಈ ಬಗ್ಗೆ ಪರಿಶೀಲನೆ ನಡೆಸಿಲ್ಲ ಎಂಬುದು ಇದರಿಂದ ತಿಳಿಯುತ್ತದೆ. ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಕಲ್ಯಾಣ ಮಂಟಪಗಳು ಸಾರ್ವಜನಿಕರ ಹಿತದೃಷ್ಟಿಯಿಂದ ವಾಹನಗಳ ಪಾರ್ಕಿಂಗ್ಗೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕು. ಈ ಕೆಲಸ ಜರೂರಾಗಿ ಆಗದೆ ಹೋದರೆ ನಗರಸಭೆ ಮತ್ತು ಪೊಲೀಸ್ ಇಲಾಖೆ ಅಂತಹ ಕಲ್ಯಾಣ ಮಂಟಪಗಳ ವಿರುದ್ಧ ಕ್ರಮ ಜರುಗಿಸಬೇಕು.
-ಸತೀಶ್, ಗೌರಿ ಕಾಲುವೆ, ಚಿಕ್ಕಮಗಳೂರು
ಒಳಚರಂಡಿಯಲ್ಲಿ ನೀರಿನ ಪೈಪ್
ನಗರದ ಹಲವೆಡೆ ಯು.ಜಿ.ಡಿ ಗುಂಡಿಯೊಳೆಗೆ ನೀರಿನ ಪೈಪನು ಅವೈಜ್ಞಾನಿಕವಾಗಿ ಆಳವಡಿಸಿದ್ದು ಇದರಿಂದ ಮುಂದೊಂದು ದಿನ ಚಿಕ್ಕಮಗಳೂರು ನಗರದ ಜನರಿಗೆ ಮಾರಕ ರೋಗ ಹರಡುವ ಸಾಧ್ಯತೆ ಇದೆ.
ಇಲ್ಲಿನ ಜಯನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಒಳಚರಂಡಿ ಗುಂಡಿಗಳನ್ನು ಜೆಸಿಬಿ ಮೂಲಕ ತೋಡಿದ್ದು ಇದರೊಳಗೆ ಕುಡಿಯುವ ನೀರಿನ ಪೈಪ್ಲೈನ್ ಸಹ ಸೇರಿಕೊಂಡಿದೆ ಇದನ್ನು ತಪ್ಪಿಸಿ ಬೇರೆಡೆ ಗುಂಡಿ ತೋಡುವಂತೆ ಗುತ್ತಿಗೆದಾರರಿಗೆ ತಿಳಿಸಿದರೆ ಅವರಿಂದ ಉಡಾಫೆ ಉತ್ತರ ಬರುತ್ತಿದೆ.
ಒಳಚರಂಡಿಯ ಕಲುಷಿತ ನೀರು ಕುಡಿಯುವ ನೀರಿನೊಂದಿಗೆ ಮಿಶ್ರಣವಾದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದೆ. ಈ ಬಗ್ಗೆ ಜಿಲ್ಲಾಡಳಿತ ಪರಿಶೀಲನೆ ಮಾಡಿ ಇಂತಹ ಅವೈಜ್ಞಾನಿಕ ಕಾಮಗಾರಿಯನ್ನು ತಡೆ ಹಿಡಿಯಬೇಕು.
-ಜಯನಗರ ಬಡಾವಣೆ ನಿವಾಸಿಗರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

