'ವಿಜ್ಞಾನದ ಸದ್ಬಳಕೆಯಾಗಲಿ'
ಕ.ಪ್ರ.ವಾರ್ತೆ, ಶೃಂಗೇರಿ, ನ.10
ಮನುಕುಲದ ಒಳಿತಿಗಾಗಿ ವಿಜ್ಞಾನ ಸದ್ಬಳಕೆಯಾಗಬೇಕೆ ಹೊರತು ಮನುಕುಲದ ವಿನಾಶಕಲ್ಲ ಎಂದು ಜೆಸಿಎಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಪ್ರೊ. ಗಜಾನನ ಎಂ. ಭಟ್ ತಿಳಿಸಿದರು.
ಪಟ್ಟಣದ ಜೆಸಿಎಸ್ ಶಿಕ್ಷಣ ಸಂಸ್ಥೆ ಆವರಣದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಪ್ರೌಢಶಾಲೆಗಳ ವಿಜ್ಞಾನ ವಸ್ತುಪ್ರದರ್ಶನದ ಅಧ್ಯಕ್ಷತೆ ವಹಿಸಿ ಮಾತನಾಡಿ, ಒಂದೆಡೆ ವೈಜ್ಞಾನಿಕ ಕ್ಷೇತ್ರಗಳ ಅಭಿವೃದ್ಧಿ ಕಾರಣವಾಗಿದ್ದರೆ, ಇನ್ನೊಂದೆಡೆ ರಾಷ್ಟ್ರಗಳ ಪತನಕ್ಕೂ ಕಾರಣವಾಗುತ್ತಿವೆ. ಜಗತ್ತು ಕಂಡ ಎರಡು ಜಾಗತಿಕ ಯುದ್ಧಗಳು ಅನಾಹುತಗಳ ಸರಮಾಲೆಯನ್ನೇ ಸೃಷ್ಟಿಸಿತ್ತು. ಅದರ ಪರಿಣಾಮ ಜಪಾನಿನ ಹಿರೋಶಿಮ,ನಾಗಸಾಕಿ ಪಟ್ಟಣಗಳೇ ಸಾಕ್ಷಿಯಾಗಿವೆ ಎಂದರು.
ವೈಜ್ಞಾನಿಕ ಅರಿವು ಅಗತ್ಯ: ಅಣ್ವಸ್ತ್ರ ಯುದ್ಧಗಳು, ಪರಮಾಣು ಬಾಂಬುಗಳ ಬಳಕೆ ಇಡೀ ಮನುಕುಲ, ಜೀವ ಜಗತ್ತಿಗೆ ಮಾರಕವಾಯಿತು. ದೇಶಗಳ ಅಭಿವೃದ್ಧಿ ಹೆಸರಿನಲ್ಲಿ ವಿಜ್ಞಾನದ ದುರ್ಬಳಕೆಯಾಗಬಾರದು.
ಒಳ್ಳೆಯ ಕೆಲಸಗಳಿಗೆ ಬಳಕೆಯಾಗಬೇಕು. ವಿದ್ಯಾರ್ಥಿಗಳಿಗೆ ವೈಜ್ಞಾನಿಕತೆಯ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಸನ್ನ ಕುಮಾರ್, ವೈಜ್ಞಾನಿಕ ಯುಗದಲ್ಲಿ ಮಕ್ಕಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸಿ ಅವರಲ್ಲಿನ ಪ್ರತಿಭೆಗಳನ್ನು ಹೊರಸೆಳೆಯುವ ಪ್ರಯತ್ನಗಳು ನಡೆಯಬೇಕಿದೆ. ಅದಕ್ಕಾಗಿ ಇಂತಹ ವೇದಿಕೆಗಳ ಅನಿವಾರ್ಯತೆಯಿದೆ ಎಂದರು.
ಮುಖ್ಯ ಅತಿಥಿಗಳಾಗಿ ಶಿಕ್ಷಣ ಸಂಯೋಜಕಿ ರಶ್ಮಿ ಪ್ರಸನ್ನಕುಮಾರ್ ಮತ್ತಿತರರು ಉಪಸ್ಥಿತರಿದ್ದರು. ಸಂತೋಷ್‌ಕುಮಾರ್ ಸ್ವಾಗತಿಸಿದರು. ರಜನಿ ನಿರೂಪಿಸಿ ಕೌಶಲ್ಯ ವಂದಿಸಿದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

