ಅಮೋನಿಯಂ ನೈಟ್ರೇಟ್ ಸಾಗಣೆ ಮೂಡಿಗೆರೆಯ ಇಬ್ಬರ ಬಂಧನ
ಕಲ್ಪೆಟ್ಟಾ (ಕೇರಳ): ಅಕ್ರಮವಾಗಿ ಅಮೋನಿಯಂ ನೈಟ್ರೇಟ್ ಅನ್ನು ಸಾಗಿಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಅವರ ಬಳಿಯಿಂದ 6,750 ಕಿಲೋಗ್ರಾಂನಷ್ಟು ಅಮೋನಿಯಂ ನೈಟ್ರೇಟ್ ಅನ್ನು ಅಬಕಾರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಜತೆಗೆ ವಾಹನವೊಂದನ್ನೂ ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಕರ್ನಾಟಕದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಕೀಮ್ ಮತ್ತು ಇಶಾಕ್ ಎಂದು ಗುರುತಿಸಲಾಗಿದೆ. ಕೇರಳ-ಕರ್ನಾಟಕ ಗಡಿ ಪ್ರದೇಶದ ಮುತ್ತಂಗ ಎಂಬಲ್ಲಿ ಕಳೆದ ರಾತ್ರಿ ಅಬಕಾರಿ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿದ ವೇಳೆ ಈ ಪ್ರಕರಣ ಬೆಳಕಿಗೆ ಬಂದಿದೆ. ಕಲ್ಲಿಕೋಟೆಯಲ್ಲಿರುವ ಕಲ್ಲಿನ ಕ್ವಾರಿಯೊಂದಕ್ಕೆ ಅಮೋನಿಯಂ ನೈಟ್ರೇಟ್ ಅನ್ನು ಸಾಗಿಸಲಾಗುತ್ತಿತ್ತು ಎಂದು ಬಂಧಿತರು ತಿಳಿಸಿದ್ದಾರೆ ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಕುವಿವಿ ಕುಲಸಚಿವ ಪ್ರೊ. ರಾಮೇಗೌಡ ಎತ್ತಂಗಡಿ
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಅಂಕಪಟ್ಟಿ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರವು ಮತ್ತೊಂದು ಪ್ರಮುಖ ತಲೆದಂಡ ತೆಗೆದುಕೊಂಡಿದೆ. ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರೊ. ಎ.ರಾಮೇಗೌಡ ಅವರನ್ನು ಸೋಮವಾರ ಕುಲಸಚಿವ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ. ಇವರ ಸ್ಥಾನಕ್ಕೆ ಪ್ರೊ. ಮಲ್ಲಿಕಾಘಂಟಿಯವರನ್ನು ಆಯ್ಕೆ ಮಾಡಿದ್ದು, ಮಂಗಳವಾರ ಬಹುತೇಕ ಅಧಿಕಾರ ಸ್ವೀಕರಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

