ಚಿಕ್ಕಮಗಳೂರು

ತಿಮ್ಮಾಪುರದಲ್ಲಿ ಅಂಗನವಾಡಿ ಕಟ್ಟಡ ಉದ್ಘಾಟನೆ

Published On :

ತರೀಕೆರೆ: ಎರಡು ಕೋಟಿ ರು. ಶಾಸಕರ ನಿಧಿಗೆ ನೀಡಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ.
ಸೋಮವಾರ ಸಮೀಪದ ತಿಮ್ಮಾಪುರ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನೂತನವಾಗಿ ನಿರ್ಮಾಣವಾದ ಅಂಗನವಾಡಿ ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತಾಡುತ್ತಿದ್ದರು.
ಸಮುದಾಯ ಭವನಕ್ಕೆ ನೆರವು: ಜಿಲ್ಲಾಧಿಕಾರಿಗಳ ಬಳಿ ಮೂತನಾಡಿ ತಿಮ್ಮಾಪುರ ಗ್ರಾಮಕ್ಕೆ ಪ್ರತ್ಯೇಕವಾಗಿ ಚುನಾವಣಾ ಮತಗಟ್ಟೆ ಮಂಜೂರು ಮಾಡಿಸಲಾಗುವುದು, ಸಂಸತ್ ಕ್ಷೇತ್ರದಲ್ಲಿ ಸಮುದಾಯ ಭವನ ನಿರ್ಮಾಣಕ್ಕಾಗಿ 75 ಲಕ್ಷ ಅನುದಾನ ನೀಡಲಾಗಿದೆ ಎಂದು ತಿಳಿಸಿದ ಅವರು ತಿಮ್ಮಾಪುರ ಗ್ರಾಮದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳ ಗುರುತಿಸಿ, ಅಂದಾಜು ಪಟ್ಟಿ ತಯಾರಿಸಿ ಜಿಲ್ಲಾಧಿಕಾರಿಗಳಿಗೆ ನೀಡಿ ಮುಂದಿನ ಕೆಲಸವನ್ನು ನಾವು ಮಾಡುತ್ತೇವೆ ಎಂದು ಅವರು ತಿಳಿಸಿದರು.
ಶಾಸಕ ಜಿ.ಎಚ್. ಶ್ರೀನಿವಾಸ್ ಅವರು ಮಾತನಾಡಿ, ತಾ.ಪಂ.ಅನುದಾನದಲ್ಲಿ ಅಂಗನವಾಡಿ ನಿರ್ಮಿಸಲಾಗಿದೆ. ಬುಕ್ಕಾಂಬುದಿ ಕೆರೆಯಿಂದ ನೀರು ಹರಿದು ಬರುವ ಕಾಲುವೆ ಹೂಳು ತೆಗೆಸಲಾಗುವುದು, ತಿಮ್ಮಾಪುರ ಗ್ರಾಮದಲ್ಲಿ ಬಸ್ ಶೆಲ್ಟರ್ ನಿರ್ಮಿಸಲಾಗುವುದು ಮತ್ತು ಗ್ರಾಮಕ್ಕೆ ಪ್ರತ್ಯೇಕ ಮತಗಟ್ಟೆ ಸ್ಥಾಪಿಸಲಾಗುವುದು ಎಂದು ತಿಳಿಸಿದರು.
ತಾ.ಪಂ. ಸದಸ್ಯ ವಿರುಪಾಕ್ಷಪ್ಪ ಮಾತನಾಡಿದರು. ತಾ.ಪಂ.ಅಧ್ಯಕ್ಷೆ  ಶಾಂತ ಗುರುಮೂರ್ತಿ, ತಾ.ಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಜಗದೀಶ್, ಗ್ರಾ.ಪಂ.ಅಧ್ಯಕ್ಷೆ ಲಕ್ಷ್ಮಮ್ಮ, ಉಪಾಧ್ಯಕ್ಷೆ ಮಂಜಮ್ಮ,, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಘನಿ ಅನ್ವರ್, ಬಿ.ಎಸ್.ಆರ್. ಮಂಜುನಾಥ್, ಎ.ಸಿ. ಚಂದ್ರಪ್ಪ, ರಾಮಚಂದ್ರಪ್ಪ, ಚಂದ್ರಪ್ಪ, ಜ್ಯೋತಿಲಕ್ಷ್ಮಿ, ಮತ್ತಿತರರು ಸಮಾರಂಭದಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.