14ರಿಂದ ಶೃಂಗೇರಿಯಲ್ಲಿ ವಿಶ್ವ ಹೃದಯ ಸಮ್ಮೇಳನ
ಶೃಂಗೇರಿ: ಋಷಿ ಸಂಸ್ಕೃತಿ ವಿದ್ಯಾ ಕೇಂದ್ರ ಟ್ರಸ್ಟ್ ಹಾಗೂ ಸಿದ್ದ ಸಮಾದಿ ಯೋಗ ಟ್ರಸ್ಟ್ ಆಶ್ರಯದಲ್ಲಿ ನವೆಂಬರ್ 14 ರಿಂದ 16 ರವರೆಗೆ ಶೃಂಗೇರಿಯಲ್ಲಿ ವಿಶ್ವ ಹೃದಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಶಿಕ್ಷಕ ಸತೀಶ್ ತಿಳಿಸಿದ್ದಾರೆ.
ಅವರು ಸಮ್ಮೇಳನದ ಅಂಗವಾಗಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರಿಗೆ ಆರೋಗ್ಯದ ಬಗ್ಗೆ ಕಾಳಜಿ, ಒತ್ತಡ ರಹಿತ ಜೀವನ ನಡೆಸುವ ಬಗ್ಗೆ ತಿಳುವಳಿಕೆ ನೀಡುವುದು, ವಿಘಟನೆಯಾಗಿರುವ ಅವಿಭಕ್ತ ಕುಟುಂಬಗಳಲ್ಲಿ ಸಹಬಾಳ್ವೆ, ಸಹಜೀವನ ನಡೆಸುವ ಬಗ್ಗೆ ಅರಿವು ಮೂಡಿಸುವುದು ಸಮ್ಮೇಳನದ ಉದ್ದೇಶವಾಗಿದೆ ಎಂದು ತಿಳಿಸಿದರು.
ಕೆ.ಎಸ್. ಈಶ್ವರಪ್ಪ ಉಪಸ್ಥಿತಿ: 15 ರ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರ ದಿವ್ಯ ಸಾನ್ನಿದ್ಯದಲ್ಲಿ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಪಂಜಾಬಿನ ಆನಂದಪುರ ಸಾಹಿಬ್ ಪೂಜ್ಯ ಬಾಬಾಜಿ, ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದ ಶ್ರೀ ಗುಣನಾಥ ಸ್ವಾಮೀಜಿ, ಮಾಜಿ ಉಪಮುಖ್ಯ ಮಂತ್ರಿ ಕೆ.ಎಸ್. ಈಶ್ವರಪ್ಪ, ಶಾಸಕ ಡಿ.ಎನ್. ಜೀವರಾಜ್ ಪಾಲ್ಗೊಳ್ಳಲಿದ್ದಾರೆ. ಸಚಿವ ಕೆ. ಅಭಯಚಂದ್ರ ಜೈನ್, ಉಡುಪಿ ಚಿಕ್ಕಮಗಳೂರು ಸಂಸದ ಕೆ. ಜಯಪ್ರಕಾಶ್ ಹೆಗ್ಡೆ, ಕಡೂರು ಶಾಸಕ ವೈಎಸ್ವಿ ದತ್ತ, ಶೃಂಗೇರಿ ಶಾಸಕ ಡಿ.ಎನ್. ಜೀವರಾಜ್, ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ರಾಜ್ಗೋಪಾಲ್, ಶಿವಪ್ರಕಾಶ್, ಚಂದ್ರಕಾಂತ ರಾವ್, ಅಂಗುರಡಿ ದಿನೇಶ ಮತ್ತಿತರರು ಗೋಷ್ಠಿಯಲ್ಲಿ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

