ಚಿಕ್ಕಮಗಳೂರು

'ಶಿಕ್ಷಣ ಕ್ಷೇತ್ರಕ್ಕೆ ಮೌಲಾನ ಕೊಡುಗೆ ಅಪಾರ'

Published On :

ತರೀಕೆರೆ: ದೇಶದ ಶಿಕ್ಷಣ ಕ್ಷೇತ್ರಕ್ಕೆ ಮೌಲಾನ ಅಬುಲ್ ಕಲಾಂ ಆಜಾದ್ ಅವರ ಕೊಡುಗೆ ಆಪಾರವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹರಿಪ್ರಸಾದ್ ತಿಳಿಸಿದ್ದಾರೆ.
ಅವರು, ಸೋಮವಾರ ಪಟ್ಟಣದ ಶಾಸಕರ ಮಾದರಿ ಹಿ.ಪ್ರಾ.ಶಾ ಮತ್ತು ಪೇಟಾ ಹಿ.ಪ್ರಾ.ಶಾಲೆಯ ವತಿಯಿಂದ ಮೌಲಾನ ಅಬುಲ್ ಕಲಾಂ ಆಜಾದ್ ಜನ್ಮದಿನಾಚರಣೆ ಅಂಗವಾಗಿ ಏರ್ಪಾಡಾಗಿದ್ದ ರಾಷ್ಟ್ರೀಯ ಶಿಕ್ಷಣ ದಿನಾಚರಣೆ ಸಮಾರಂಭದ ಅದ್ಯಕ್ಷತೆ ವಹಿಸಿ ಮಾತಾಡುತ್ತಿದ್ದರು.
ಸ್ವಾತಂತ್ರ್ಯಾನಂತರ  ದೇಶದ ಮೊದಲ ಶಿಕ್ಷಣ ಮಂತ್ರಿಗಳಾಗಿ, ಉನ್ನತ ಶಿಕ್ಷಣ ಬಲ ಪಡಿಸಲು ಯುಜಿಸಿ, ಐಐಟಿ, ಐಸಿಎಸ್ಆರ್ನಂತಹ ಸಂಸ್ಥೆಗಳನ್ನು ಸ್ಥಾಪಿಸಿ ದೇಶದ ಉನ್ನತ ಶಿಕ್ಷಣಕ್ಕೆ ಮುನ್ನುಡಿ ಬರೆದ ಅಬುಲ್ ಕಲಾಂ ಆಜಾದ್ ಅವರು ಭಾರತದ ಯಾವ ಭಾಗಕ್ಕೆ ಹೋದರೂ ಶಾಲೆಗಳಲ್ಲಿ ಮಕ್ಕಳಿಗೆ ಪಾಠ ಮಾಡುತ್ತಿದ್ದರು ಎಂದು ತಿಳಿಸಿದರು.
ಶಾಲೆ ಮುಖ್ಯೋಪಾಧ್ಯಾಯ ಸಾದಿಕ್ ಬಾಷ ಮಾತನಾಡಿ, ಮೌಲಾನ ಅಬುಲ್ ಕಲಾಂ ಆಜಾದ್ ಅವರ ಜನ್ಮದಿನಾಚರಣೆಯನ್ನು ರಾಷ್ಟ್ರೀಯ ಶಿಕ್ಷಣ ದಿನಾಚರಣೆಯನ್ನಾಗಿ ಆಚರಿಸಬೇಕೆಂದು ಶಿಕ್ಷಣ ಇಲಾಖೆಯು ಸೂಚಿಸಿದೆ ಎಂದು ತಿಳಿಸಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಜಿ. ಸುಬ್ರಹ್ಮಣ್ಯ ಅವರು ಮಾತನಾಡಿ, ಶಿಕ್ಷಕರು ಮನಸ್ಸು ಮಾಡಿದರೆ ಬದಲಾವಣೆಗಳನ್ನು ತರಬಹುದು. ಮೌಲಾನ ಅಬುಲ್ ಕಲಾಂ ಅವರು ದೇಶದ ಮಹಾನ್ ವ್ಯಕ್ತಿಯಾಗಿದ್ದಾರೆ ಎಂದು ತಿಳಿಸಿದರು.
ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಮಚಂದ್ರಪ್ಪ ಅವರು ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.