ಅಂಗನವಾಡಿ ಕಾರ್ಯಕರ್ತೆಯರ ಸಭೆ
ಕೊಪ್ಪ: ತಾಲೂಕು ಪಂಚಾಯಿತಿ ಸದಸ್ಯರು ಹಾಗೂ ಅಂಗನವಾಡಿ ಕಾರ್ಯಕರ್ತರ ಸಮಲೋಚನಾ ಸಭೆ ಮಂಗಳವಾರ ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ವೇತನ ಪಡೆಯಲು ಬಂದ ಅಂಗನವಾಡಿ ಕಾರ್ಯಕರ್ತರ ಸಭೆ ನಡೆಸುತ್ತಿರುವ ಬಗ್ಗೆ ಕೆಲವು ಅಂಗನವಾಡಿ ಕಾರ್ಯಕರ್ತೆಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಗುಣಮಟ್ಟ ತಿಳಿಯದು: ತಾಪಂ ಅಧ್ಯಕ್ಷೆ ಪದ್ಮವತಿ ರಮೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಅಂಗನವಾಡಿಗೆ ಸರಬರಾಜಾಗುವ ಬೆಳೆ, ಬೆಲ್ಲ ಮೊದಲಾದವು ಪೊಟ್ಟಣದಲ್ಲಿ ಸರಬರಾಜಾಗುತ್ತಿದ್ದು ಅವುಗಳ ಗುಣಮಟ್ಟ ತಿಳಿಯುವುದು ಕಷ್ಟವಾಗಿದೆ ಎಂದು ಕಾರ್ಯಕರ್ತೆಯರು ದೂರಿದರು.
ಉತ್ತಮೇಶ್ವರ ಅಂಗನವಾಡಿ ದುರಸ್ಥಿಗೆ, ಬೈರೇದೇವರು ಅಂಗನವಾಡಿ ಕಟ್ಟಡಕ್ಕೆ ಸುಣ್ಣ ಬಣ್ಣ ಬಳಿಯಲು ಕಾರ್ಯಕರ್ತರು ಒತ್ತಾಯಿಸಿದರು.
ತಾಪಂ ಉಪಾಧ್ಯಕ್ಷ ಪೂರ್ಣಚಂದ್ರ, ಸದಸ್ಯರಾದ ನಾರಾಯಣ್ ಪಳನಿ,ಪ್ರೇಮಾ ದಾಮೋದರ್, ರುಕ್ಮಿಣಿ, ಲಲಿತಾ, ಸುಭದ್ರಮ್ಮ, ಜಿಪಂ ಸದಸ್ಯೆ ಅನ್ನಪೂರ್ಣ, ಶಿಶು ಕಲ್ಯಾಣಾಧಿಕಾರಿ ಉಮೇಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

