'ಮಟ್ಕಾ ದಂಧೆಗೆ ಕಡಿವಾಣ ಹಾಕಿ'
ಚಿಕ್ಕಮಗಳೂರು: ನಗರದಲ್ಲಿ ನಡೆಯುತ್ತಿರುವ ಮಟ್ಕಾ ದಂಧೆಗೆ ಕಡಿವಾಣ ಹಾಕುವಂತೆ ಯುವಶಕ್ತಿ ಮಾನವತಾ ವೇದಿಕೆ ಜಿಲ್ಲಾಡಳಿತವನ್ನು ಆಗ್ರಹಿಸಿದೆ. ವೇದಿಕೆಯ ಕಾರ್ಯಕರ್ತರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಹೆಚ್ಚಿನ ಹಣ ನೀಡುವ ಆಮಿಷವೊಡ್ಡಿ ಬಡ ಕೂಲಿ ಕಾರ್ಮಿಕರನ್ನು ವಂಚಿಸುವ ಮಟ್ಕಾ ಜೂಜಿನ ಹಾವಳಿ ನಗರದಲ್ಲಿ ಹೆಚ್ಚಾಗಿದೆ. ಇದಕ್ಕೆ ಕಾಣದ ಕೈಗಳು ನಿರಂತರವಾಗಿ ಸಹಕರಿಸುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ಹಿಂದಿನ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಆದರೂ, ಈ ದಂಧೆ ಮುಂದುವರೆದಿದೆ ಎಂದಿದ್ದಾರೆ. ಪ್ರತಿಭಟನೆಯಲ್ಲಿ ವೇದಿಕೆಯ ಅಧ್ಯಕ್ಷ ರಂಗನಾಥ್, ಪ್ರಸನ್ನ, ಮಂಜು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಅಕ್ರಮ ಮದ್ಯ ನಾಶ
ನರಸಿಂಹರಾಜಪುರ: ಅಬಕಾರಿ ಇಲಾಖೆ ಮತ್ತು ಪೊಲೀಸ್ ಇಲಾಖೆಯು ವಿವಿಧ ಪ್ರಕರಣಗಳಲ್ಲಿ ವರ್ಷಪಡಿಸಿಕೊಂಡಿದ್ದ 12 ಸಾವಿರ ರುಪಾಯಿ ಬೆಲೆ ಬಾಳುವ 55 ಲೀಟರ್ ಅಕ್ರಮ ಮದ್ಯಗಳನ್ನು ಮಂಗಳವಾರ ತಾಪಂ ಸಮೀಪ ನಾಶಪಡಿಸಲಾಯಿತು. ಮೂಡಿಗೆರೆ ಅಬಕಾರಿ ಇಲಾಖೆ ಉಪ ಅಧೀಕ್ಷಿಕ ಮಂಜೇಗೌಡ ಅವರ ನೇತ್ರತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಕೊಪ್ಪ ಅಬಕಾರಿ ಇಲಾಖೆಯ ನಿರೀಕ್ಷಿಕ ಪ್ರದೀಪ್, ನರಸಿಂಹರಾಜಪುರ ಅಬಕಾರಿ ಇಲಾಖೆಯ ಉಪ ನಿರೀಕ್ಷಿಕ ತೊಳಚನಾಯಕ್, ಪೊಲೀಸ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

