ಇಂದು ಪ್ರಗತಿ ಪರಿಶೀಲನೆ ಸಭೆ
ಚಿಕ್ಕಮಗಳೂರು: ದೂರದ ಮತ್ತು ಒಳನಾಡು ಪ್ರದೇಶಗಳ ಅಭಿವೃದ್ಧಿಯಡಿ ಜಿಲ್ಲೆಯ ನಕ್ಸಲ್ ಪೀಡಿತ ಪ್ರದೇಶದಲ್ಲಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ಹಾಗೂ ಆ ಪ್ರದೇಶದ ಮೂಲಭೂತ ಸೌಲಭ್ಯಗಳ ಕುರಿತು ಚರ್ಚಿಸಲು ಬುಧವಾರದಂದು ಕೆರೆಕಟ್ಟೆ ಹಾಗೂ ಮೇಗೂರಿನಲ್ಲಿ ಜನಸಂಪರ್ಕ ಸಭೆ ನಡೆಯಲಿದೆ. ಶೃಂಗೇರಿ ತಾಲೂಕು ಕೆರೆಕಟ್ಟೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬೆಳಿಗ್ಗೆ 10 ಗಂಟೆಗೆ ಹಾಗೂ ಕೊಪ್ಪ ತಾಲೂಕು ಮೇಗೂರು ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಆವರಣದಲ್ಲಿ ಮಧ್ಯಾಹ್ನ 3 ಗಂಟೆಗೆ ಸಭೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ. ಅಭಯಚಂದ್ರ ಜೈನ್ ಹಾಗೂ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಅವರು ಈ ಸಭೆಯಲ್ಲಿಭಾಗವಹಿಸಲಿದ್ದಾರೆ.
ಪದಾಧಿಕಾರಿ ಆಯ್ಕೆ
ಶೃಂಗೇರಿ: ತಾಲೂಕಿನ ವೈಕುಂಠಪುರ ಗ್ರಾಮದ ಶುಂಠಿಹಕ್ಲು ಶ್ರೀರಾಮ ಸೇನೆ ಸಂಘಟನೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕಿಯೆ ಇತ್ತೀಚೆಗೆ ನಡೆಯಿತು.ನೂತನ ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ನಾಗೇಶ್ ಆಯ್ಕೆಯಾದರು. ಜಿಲ್ಲಾಧ್ಯಕ್ಷ ಮಹೇಶ್, ತಾಲೂಕು ಘಟಕದ ಉಪಾಧ್ಯಕ್ಷ ನಗರ ಸಂಚಾಲಕ ಸತೀಶ್ ಮತ್ತಿತರರು ಉಪಸ್ಥಿತರಿದ್ದರು.
17 ಕ್ಕೆ ಉಚಿತ ನೇತ್ರ ತಪಾಸಣಾ ಶಿಬಿರ
ಶೃಂಗೇರಿ: ಶಿವಮೊಗ್ಗದ ಮಲ್ನಾಡ್ ಕಣ್ಣಿನ ಮತ್ತು ಮಕ್ಕಳ ಆಸ್ಪತ್ರೆ, ಸಾರ್ವಜನಿಕ ಆಸ್ಪತ್ರೆ ಶೃಂಗೇರಿ ಹಾಗೂರೋಟರಿ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 17 ರ ಭಾನುವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಶಿಬಿರದಲ್ಲಿ ಕಣ್ಣಿನ ತೊಂದರೆ, ಮಧುಮೇಹ, ರಕ್ತ ಒತ್ತಡ ರೆಟಿನೋಪತಿ ಮುಂತಾದ ಕಣ್ಣಿನ ಸಮಸ್ಯೆಗಳಿಗೆ ಉಚಿತ ತಪಾಸಣೆ ನಡೆಸಲಾಗುವುದು. ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಸರ್ಕಾರಿ ಆಸ್ಪತ್ರೆಯನ್ನು ಸಂಪರ್ಕಿಸಬಹುದಾಗಿದೆ.
ಜನಸಂಪರ್ಕ ಸಭೆ
ಶೃಂಗೇರಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕೆರೆ ಪಂಚಾಯಿತಿ ಕೆರೆಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾವರಣದಲ್ಲಿ ಬುಧವಾರ ಜನಸಂಪರ್ಕ ಸಭೆ ಆಯೋಜಿಸಲಾಗಿದೆ. ಬೆಳಿಗ್ಗೆ 10 ಗಂಟೆಯಿಂದ ಸಭೆ ಆರಂಭವಾಗಲಿದೆ.ಜಿಲ್ಲಾ ಉಸ್ತುವಾರಿ ಸಚಿವ ಅಭಯಚಂದ್ರ ಜೈನ್,ಉಡುಪಿ ಚಿಕ್ಕಮಗಳೂರು ಸಂಸದ ಜಯಪ್ರಕಾಶ್ ಹೆಗ್ಡೆ, ಜಿಲ್ಲಾಧಿಕಾರಿಶೇಖರಪ್ಪ, ಜಿಲ್ಲಾ ವರಿಷ್ಠಾಧಿಕಾರಿ ಅಭಿಷೇಕ್ ಕೊಯಲ್ ಸೇರಿದಂತೆ ಜನಪ್ರತಿನಿಧಿಗಳು, ಪಾಲ್ಗೊಳ್ಳಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

