ನಾಳೆ ಗ್ರಂಥಾಲಯ ಸಪ್ತಾಹ ಉದ್ಘಾಟನೆ
ಚಿಕ್ಕಮಗಳೂರು: ಸಾರ್ವಜನಿಕ ಗ್ರಂಥಾಲಯ ಇಲಾಖೆ, ನಗರ ಕೇಂದ್ರ ಗ್ರಂಥಾಲಯ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹವನ್ನು ನ. 14 ರಂದು ಬೆಳಗ್ಗೆ 9 ಗಂಟೆಗೆ ನಗರ ಕೇಂದ್ರ ಗ್ರಂಥಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿ ಶೇಖರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು, ಲೇಖಕ ಶ್ರೀಕಂಠ ಕೂಡಿಗೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಾಹಿತಿ ಮಲ್ಲಿಕಾರ್ಜುನ ಅಲೆಗಾವಿ, ಐಡಿಎಸ್ಜಿ ಕಾಲೇಜಿನ ಪ್ರಾಂಶುಪಾಲ ಬಸವರಾಜು, ಸರ್ಕಾರಿ ಜೂ.ಕಾಲೇಜು ಪ್ರಾಂಶುಪಾಲ ವಾಸುದೇವ, ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ, ಕಸಾಪ ಕಾರ್ಯದರ್ಶಿ ವೆಂಕಟೇಶ್ ಭಾಗವಹಿಸಲಿದ್ದಾರೆ.
ಅರ್ಜಿ ಆಹ್ವಾನ
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ರಾಜ್ಯ ಸರ್ಕಾರದಲ್ಲಿ ಅತ್ತ್ಯುನ್ನತ ಸೇವೆ, ಸಾಧನೆ ಗೈದ ರಾಜ್ಯ ಸರ್ಕಾರಿ ನೌಕರರಿಗೆ ಪ್ರಸಕ್ತ ಸಾಲಿನ ಗಣರಾಜ್ಯೋತ್ಸವದಂದು ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಜಿಲ್ಲಾವಾರು, ಇಲಾಖಾವಾರು ಮತ್ತು ರಾಜ್ಯ ಮಟ್ಟದಲ್ಲಿ ನೀಡಲು ಅರ್ಹ ರಾಜ್ಯ ಸರ್ಕಾರಿ ನೌಕರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾವಾರು ಪ್ರಶಸ್ತಿಗೆ ನಾಮ ನಿರ್ದೇಶನ ಪಡೆಯಲು ಚಿಕ್ಕಮಗಳೂರು ಕಂದಾಯ ಉಪ ವಿಭಾಗದ ಉಪ ವಿಭಾಗಾಧಿಕಾರಿಗಳನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ. ಆಯಾ ಇಲಾಖೆಯ ಮುಖ್ಯಸ್ಥರು ಮತ್ತು ನಾಗರಿಕರು ಸಹ ಉತ್ತಮ ಸರ್ಕಾರಿ ನೌಕರರ ಹೆಸರನ್ನು ಡಿ. 31 ರೊಳಗೆ ನೋಡಲ್ ಅಧಿಕಾರಿಗೆ ಸಲ್ಲಿಸಬಹುದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

