ನಾಳೆ ಆರ್ಥಿಕ ಅಬಲರ ಸೇರ್ಪಡೆ ಕಾರ್ಯಕ್ರಮ
ಚಿಕ್ಕಮಗಳೂರು: ಸಹಕಾರ ಸಪ್ತಾಹದ ಅಂಗವಾಗಿ ನ.15 ರಂದು ನಗರದ ಕುವೆಂಪು ಕಲಾ ಮಂದಿರದಲ್ಲಿ ಆರ್ಥಿಕ ಅಬಲರ ಸೇರ್ಪಡೆ ಹಾಗೂ ಸುಸ್ಥಿರ ಅಭಿವೃದ್ಧಿಯಲ್ಲಿ ಸಹಕಾರಿ ಸಂಸ್ಥೆಗಳ ದಿನವನ್ನು ಆಚರಿಸಲಾಗುವುದು ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳದ ನಿರ್ದೇಶಕ ಬಿ.ಸಿ. ಲೋಕಪ್ಪಗೌಡ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ, ಕರ್ನಾಟಕ ಸಹಕಾರ ಅಪೆಕ್ಸ್ ಬ್ಯಾಂಕ್, ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಹಾಗೂ ಸಹಕಾರ ಯೂನಿಯನ್ ಆಶ್ರಯದಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಬುಧವಾರ ತಿಳಿಸಿದರು.
ಸಹಕಾರ ಧ್ವಜಾರೋಹಣ: ರಾಜ್ಯ ಸಹಕಾರ ಸಚಿವ ಎಚ್.ಎಸ್. ಮಹಾದೇವ ಪ್ರಸಾದ್ ಅವರು ಅಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಸಹಕಾರ ಧ್ವಜಾರೋಹಣ ನೆರವೇರಿಸಲಿದ್ದು, ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ. ದೇವೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಜಿಲ್ಲೆಯ ಸಹಕಾರಿ ಕ್ಷೇತ್ರದ ಸಾಧನೆಯ ಅಂಕಿ- ಅಂಶಗಳನ್ನೊಳಗೊಂಡ ಸಹಕಾರ ಜಾಥಾ ಅಂದು ಬೆಳಿಗ್ಗೆ ಡಿ.ಸಿ.ಸಿ. ಬ್ಯಾಂಕ್ನಿಂದ ಹೊರಟು ಮುಖ್ಯ ರಸ್ತೆಗಳ ಮೂಲಕ ಕುವೆಂಪು ಕಲಾಮಂದಿರ ತಲುಪುವ ಮೂಲಕ ಜನಜಾಗೃತಿ ಮೂಡಿಸಲಿದೆ ಎಂದು ತಿಳಿಸಿದರು.
ಸಹಕಾರಿ ಯೂನಿಯನ್ ಅಧ್ಯಕ್ಷ ಕೆ.ಟಿ. ವೆಂಕಟೇಶ್, ನಿರ್ದೇಶಕ ಎಂ.ಸಿ. ಶಿವಾನಂದಸ್ವಾಮಿ, ಸಿ.ಇ.ಓ. ಮಂಜುನಾಥ, ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಆರ್. ರಾಜಶೇಖರ್, ವ್ಯವಸ್ಥಾಪಕ ನಿರ್ದೇಶಕ ಡಿ.ಪಿ. ಲೋಕೇಗೌಡ, ಸಹಕಾರ ಸಂಘಗಳ ಉಪ ನಿಬಂಧಕ ಶಿವಕುಮಾರಸ್ವಾಮಿ, ಸಹಾಯಕ ಉಪ ನಿಬಂಧಕ ಬಸವರಾಜಪ್ಪ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

