ಚಿಕ್ಕಮಗಳೂರು

ಮಾತೃಭಾಷೆಗೆ ಆದ್ಯತೆ ಅಗತ್ಯ

Published On :

ಕ.ಪ್ರ.ವಾರ್ತೆ ಟಿ ತರೀಕೆರೆ ಟಿ  ನ.13
ಮಾತೃಭಾಷೆಗೆ ಹೆಚ್ಚಿನ ಆದ್ಯತೆ ಸಲ್ಲಬೇಕು ಎಂದು ತರೀಕೆರೆ ಪೊಲೀಸ್ ಇನ್ಸ್ಪೆಕ್ಟರ್  ಸುರೇಶ್ ಹೇಳಿದರು.
ಅವರು ಬುಧವಾರ ಕಸಬಾ ಹೋಬಳಿ ಕಸಾಪದಿಂದ ಅಂಬೇಡ್ಕರ್ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ರಾಜ್ಯೋತ್ಸವ- ನಿತ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಆಯಾ ಪ್ರದೇಶದ ಭಾಷೆಯೇ ಮಾತೃಭಾಷೆ. ನಮ್ಮ ಭಾಷೆಯಲ್ಲಿ ಚಂದವಾಗಿ ಮಾತನಾಡುವುದನ್ನು ಕಲಿಯಬೇಕು, ವೃತ್ತಿ ಜೀವನದಲ್ಲಿ ಹತ್ತು ಹಲವು ಭಾಷೆ ಕಲಿಯಿರಿ, ಹೆಚ್ಚಿನ ಆದ್ಯತೆ ಗೌರವ ಮಾತೃಭಾಷೆಗೆ ಸಲ್ಲಬೇಕು ಎಂದರು.
ತಾಯಿ ಭಾಷೆಯಲ್ಲಿ ಯೋಚಿಸಿ: ಯುವ ಮುಖಂಡ ಟಿ.ಜಿ. ಶಶಾಂಕ ಮಾತನಾಡಿ, ಎಲ್ಲರೂ ಜ್ಞಾನ ಹೆಚ್ಚಿಸಿಕೊಳ್ಳಬೇಕು ಇದರೊಂದಿಗೆ ಕನ್ನಡವನ್ನು ಮುಖ್ಯ ಭಾಷೆಯಾಗಿ ಕಲಿಯಬೇಕು ಎಂದು ತಿಳಿಸಿದರು. ತಾಲೂಕು ಕಸಾಪ ಅಧ್ಯಕ್ಷ ಜಿ. ಸುಬ್ರಹ್ಮಣ್ಯ ಅವರು ಮಾತನಾಡಿ, ತಾಯಿ ಭಾಷೆಯಲ್ಲಿ ಯೋಚಿಸಬೇಕು ಎಂದು ತಿಳಿಸಿದರು.
ಕಸಬಾ ಹೋಬಳಿ ಕಸಾಪ ಅಧ್ಯಕ್ಷ ಎನ್. ವೆಂಕಟೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡದ ಬಗ್ಗೆ ಕಳಕಳಿ ಹುಟ್ಟುವ ಕಾರ್ಯಕ್ರಮ ಆಗಬೇಕು, ಕನ್ನಡದ ಋಣ ತೀರಿಸಬೇಕು, ಕನ್ನಡವನ್ನು ಬೆಳೆಸಬೇಕು ಎಂದರು.
ಅನುಷ ಕಾರ್ಯಕ್ರಮ ಉದ್ಘಾಟಿಸಿದರು. ಶಾಲೆ ಎಸ್.ಡಿ.ಎಂ.ಸಿ.ಅಧ್ಯಕ್ಷೆ ಕಮಲಮ್ಮ, ಶಶಿಕಲಾ, ಮೆಹರುನ್ನೀಸಾ, ವಿದ್ಯಾರ್ಥಿಗಳು ಮೊದಲಾದವರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.