ಚಿಕ್ಕಮಗಳೂರು

ಸವಲತ್ತು ಕಲ್ಪಿಸಲು ಮನೆ ಬಾಗಿಲಿಗೇ ಆಡಳಿತ

Published On :

ಕಡೂರು: ಸರ್ಕಾರಿ ಸವಲತ್ತಿಗಾಗಿ ಗ್ರಾಮೀಣ ಪ್ರದೇಶದ ಜನರು ಕಚೇರಿ ಅಲೆಯುವುದನ್ನು ತಪ್ಪಿಸುವ ಉದ್ದೇಶದಿಂದ ಸರ್ಕಾರವೇ ಮನೆ ಬಾಗಿಲಿಗೆ ಬರುತ್ತಿದ್ದು ನಮ್ಮ ಜನರು ಸವಲತ್ತು ಪಡೆಯುವಲ್ಲಿ ಸಭೆಗಳಲ್ಲಿ ಭಾಗವಹಿಸುವ ಮೂಲಕ ಆಡಳಿತದಲ್ಲಿ ಪಾಲುದಾರರಾಗಬೇಕು ಎಂದು ಯಳ್ಳಂಬಳಸೆ ಜಿಲ್ಲಾ ಪಂಚಾಯ್ತಿ ಸದಸ್ಯೆ ಶಶಿರೇಖಾ ಎಂ.ಆರ್.ಟಿ. ಸುರೇಶ್ ಹೇಳಿದರು.
 ಅವರು ಕಡೂರು ತಾಲೂಕು ವೈ.ಮಲ್ಲಾಪುರದ ಗ್ರಾಮ ಪಂಚಾಯ್ತಿಯಿಂದ ಆಯೋಜಿಸಲಾಗಿದ್ದ ಗ್ರಾಮ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೇಂದ್ರ ಸರ್ಕಾರವು ಮಾರ್ಪಾಡುಗಳನ್ನು ಮಾಡುವ ಮೂಲಕ ರೈತರಿಗೆ ಅದ್ಯತೆ ನೀಡುವಂತಹ ಯೋಜನೆಗಳನ್ನು ಉದ್ಯೋಗ ಖಾತ್ರಿ ಯೋಜನೆಯಲ್ಲಿ ರೂಪಿಸಲಾಗಿದೆ ಎಂದರು.
 ಅದರಲ್ಲಿ ಗ್ರಾಮೀಣ ಜನರ ಜೀವನ ಮಟ್ಟವನ್ನು ಸುಧಾರಿಸಲು ಗುರುತಿಸಲಾಗಿರುವ 15 ಪ್ರಮುಖ ಮೂಲಭೂತ ಸೌಕರ್ಯಗಳನ್ನು ಪ್ರತೀ ಗ್ರಾ.ಪ.ಯಲ್ಲೂ ಒದಗಿಸಲು ಸರ್ಕಾರವು ಯೋಜನೆಗಳ ಮಾರ್ಪಾಡು ಮಾಡಿದೆ. ಗ್ರಾಮಗಳಲ್ಲಿ ಶುದ್ದ ಕುಡಿಯುವ ನೀರು ಒದಗಿಸುವುದು,  ಗ್ರಾಮಗಳಲ್ಲಿ ವೈಯಕ್ತಿಕ ಶೌಚಾಲಯ ವ್ಯವಸ್ಥೆ ಒದಗಿಸಲು ಕ್ರಮ ಕೈಗೊಂಡಿದೆ ಎಂದರು.
 ಪ್ರಾಸ್ತಾವಿಕವಾಗಿ ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ಮಹಮದ್ ಇಸ್ಮಾಯಿಲ್ ಖಾನ್ ಮಾತನಾಡಿ, ಈಗಾಗಲೇ ಗ್ರಾ.ಪ. ಸದಸ್ಯರು ವಾರ್ಡ್ ಸಭೆ ನಡೆಸಿ ಫಲಾನುಭವಿಗಳ ವೈಯಕ್ತಿಕ ಸೌಲಭ್ಯದ ಪಟ್ಟಿಯನ್ನು ನೀಡಿದ್ದಾರೆ. ಈ ಭಾರಿ ಪಂಚಾಯ್ತಿ ವ್ಯಾಪ್ತಿಯಲ್ಲಿ 524 ಶೌಚಾಲಯಗಳ ನಿರ್ಮಾಣದ ಗುರಿ ಹೊಂದಲಾಗಿದೆ. 1.50ಲಕ್ಷರೂ ವೆಚ್ಚದಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ತೋಟದ ಮನೆವರೆಗೆ ರಸ್ತೆ ನಿರ್ಮಾಣ ಮಾಡಲಾಗುವುದು ಎಂದರು.
ಗ್ರಾಮ ಸಭೆಯಲ್ಲಿ ಕಂದಾಯ, ಶಿಕ್ಷಣ ಇಲಾಖೆ, ಮೆಸ್ಕಾಂ,  ಕೃಷಿ ಇಲಾಖೆ ಮತ್ತಿತರು ಅಧಿಕಾರಿಗಳು ಹಾಜರಿದ್ದು ತಮ್ಮ ಇಲಾಖೆಗಳ ಸವಲತ್ತುಗಳ ಕುರಿತು ಸಭೆಯಲ್ಲಿ ಮಾಹಿತಿ ನೀಡಿದರು. ಗ್ರಾ.ಪ. ಅಧ್ಯಕ್ಷ ಆರ್.ದೊರೆಸ್ವಾಮಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಭೆಯಲ್ಲಿ ಉಪಾಧ್ಯಕ್ಷೆ ಶ್ರೀಮತಿ ರತ್ನಮ್ಮ ತೀರ್ಥಪ್ಪ, ಕಾರ್ಯದರ್ಶಿ ಹೆಚ್.ಚಂದ್ರಪ್ಪ, ಗ್ರಾಮ ಪಂಚಾಯ್ತಿ ಸದಸ್ಯರಾದ ಎಂ.ಎಸ್.ಶೇಖರಪ್ಪ, ಪರಮೇಶನಾಯ್ಕ, ಎಂ.ಎಸ್.ಮಂಜುನಾಥ್,ಎಂ.ಎಸ್.ಸತೀಶ್ ಕುಮಾರ್, ಎಂ.ನಾಗರಾಜಪ್ಪ, ಚಂದ್ರಮ್ಮ, ರತ್ನಮ್ಮ, ರತ್ನಾಬಾಯಿ,ಮಾಗದರ್ಶಿ ಅಧಿಕಾರಿ ಸಹಾಯಕ ಕೃಷಿ ನಿರ್ದೇಶಕ ಶಿವಣ್ಣ ಹಾಜರಿದ್ದು ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.