ಚಿಕ್ಕಮಗಳೂರು

ಇಂದು ಸಚಿವ ಪಾಟೀಲ್ ಭೇಟಿ

Published On :

ನರಸಿಂಹರಾಜಪುರ: ರಾಜ್ಯ ನೀರಾವರಿ ಸಚಿವ ಎಂ.ಬಿ.ಪಾಟೀಲ್ ನ. 14 ರ ಗುರುವಾರ ಬೆಳಿಗ್ಗೆ 11 ಗಂಟೆಗೆ ತಾಲೂಕಿನ ಮುತ್ತಿನಕೊಪ್ಪಕ್ಕೆ ಭೇಟಿ ನೀಡಿ ತುಂಗಾ ತಿರುವು ಯೋಜನೆಯ ಪರಿಶೀಲನೆ ಮಾಡಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಎ. ಅಬೂಬಕರ್ ತಿಳಿಸಿದ್ದಾರೆ.
ಸಮಾವೇಶಕ್ಕೆ 2 ಸಾವಿರ ಕಾರ್ಯಕರ್ತರು
ತರೀಕೆರೆ: ಬೆಂಗಳೂರು ಅರಮನೆ ಮೈದಾನದಲ್ಲಿ ನ.17ರಂದು ಆಯೋಜಿಸಿರುವ ಭಾರತ ಗೆಲ್ಲಿಸಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ತಾಲೂಕಿನಿಂದ ಸುಮಾರು 2 ಸಾವಿರಕ್ಕೂ ಹೆಚ್ಚಿನ ಕಾರ್ಯಕರ್ತರು ತೆರಳುತ್ತಿದ್ದಾರೆ ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಟಿ.ಜಿ. ಸದಾನಂದ್ ತಿಳಿಸಿದ್ದಾರೆ. ಈಗಾಗಲೇ 2000 ಪ್ರತಿನಿಧಿ ಶುಲ್ಕ 10 ರಂತೆ ಕಾರ್ಯಕರ್ತರಿಂದ ಪಡೆದಿದ್ದು, ಆನ್ಲೈನ್ ಮೂಲಕವು ನೋಂದಣಿ ಮಾಡಿಕೊಂಡಿದ್ದಾರೆ. ಎಲ್ಲ ಕಾರ್ಯಕರ್ತರು, ಅಭಿಮಾನಿಗಳು ತಮ್ಮ ಸ್ವಂತ ವೆಚ್ಚದಲ್ಲಿ ಬೆಂಗಳೂರು ಸಮಾವೇಶಕ್ಕೆ ತೆರಳುತ್ತಿದ್ದು, ಈ ಕಾರ್ಯಕ್ರಮದ ಅಂಗವಾಗಿ ನ.15ರಂದು ಪ್ರಮುಖ ಹೋಬಳಿ ಕೇಂದ್ರಗಳಲ್ಲಿ ಮತ್ತು ತರೀಕೆರೆ ನಗರದಲ್ಲಿ ಸಂಜೆ 4 ಗಂಟೆಗೆ ಬನಶಂಕರಿ ದೇವಸ್ಥಾನದ ಆವರಣದಲ್ಲಿ, ಬೈಕ್ ಜಾಥಾ ನಡೆಸಲಾಗುತ್ತಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.