ಕನಕದಾಸ ಜಯಂತಿ ಪೂರ್ವಭಾವಿ ಸಭೆ
ಕೊಪ್ಪ: ನ.20ರಂದು ನಡೆಯುವ ಭಕ್ತ ಕನಕದಾಸ ಜಯಂತಿ ಕಾರ್ಯಕ್ರಮದ ಪ್ರಯುಕ್ತ ಪೂರ್ವಭಾವಿ ಸಭೆಯನ್ನು ತಾಪಂ ಸಭಾಂಗಣದಲ್ಲಿ ಬುಧವಾರ ನಡೆಸಲಾಯಿತು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಹಾಗೂ ತಹಸೀಲ್ದಾರ್ ಶ್ರೀಧರ್ ಮೂರ್ತಿ ಪಂಡಿತ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನಕದಾಸ ಜಯಂತಿಯನ್ನು ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಜನ ಪ್ರತಿನಿಧಿಗಳು, ಇಲಾಖೆಯ ಅಧಿಕಾರಿಗಳು ಮತ್ತು ಶಾಲಾ ಮಕ್ಕಳು ಎಲ್ಲರೂ ಒಟ್ಟಾಗಿ ಕೂಡಿ ಅದ್ಧೂರಿಯಿಂದ ಸಂಭ್ರಮದಿಂದ ಆಚರಣೆ ಮಾಡೋಣ ಎಂದರು. ಅಂದು ಬೆಳಗ್ಗೆ 10 ಗಂಟೆಗೆ ಪಟ್ಟಣ ಪಂಚಾಯಿತಿಯಿಂದ ಬಸ್ ನಿಲ್ದಾಣವರೆಗೆ ಕನಕದಾಸರ ಭಾವಚಿತ್ರವನ್ನು ಕಲಾತಂಡ ಗಳೊಂದಿಗೆ ಮೆರವಣಿಗೆ ಮಾಡಿದ ಬಳಿಕ ಪುರಭವನದಲ್ಲಿ ಸಭಾ ಕಾರ್ಯಕ್ರಮವನ್ನು ಏರ್ಪಡಿಸಲಾಗುವುದು ಎಂದು ಹೇಳಿದರು. ಕನಕದಾಸರ ಜೀವನ ಚರಿತ್ರೆಕುರಿತು ಕವಿಶೈಲ ಪತ್ರಿಕೆಯ ಸಂಪಾದಕ ಎಚ್.ಎಂ. ರವಿಕಾಂತ್ ಉಪನ್ಯಾಸ ನೀಡಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ಪಟ್ಟಣದ ವಿವಿಧ ಕಲಾ ತಂಡಗಳಿಂದ ಕನಕದಾಸರ ಕೀರ್ತನೆಗಳು ಹಾಗೂ ನೃತ್ಯಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ಹೊಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮಕ್ಕೆ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರ ಗೈರು ಹಾಜರು ಎದ್ದು ಕಾಣುತ್ತಿರುವುದು ಸಾಮಾನ್ಯವಾಗಿದೆ. ಅದ್ದರಿಂದ ಕನಕದಾಸ ಜಯಂತಿ ಕಾರ್ಯಕ್ರಮಕ್ಕೆ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕು, ಗೈರು ಹಾಜರಾದವರ ಮೇಲೆ ಶಿಸ್ತಿನ ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

