ಚಿಕ್ಕಮಗಳೂರು

ವಂಚಿತರಿಗೆ ಶಿಕ್ಷಣ ಕೊಡಿಸುವುದು ಎಲ್ಲರ ಜವಾಬ್ದಾರಿ

Published On :

ಮೂಡಿಗೆರೆ: ಶಿಕ್ಷಣದಿಂದ ವಂಚಿತರಾದವರಿಗೆ ಶಿಕ್ಷಣ ಕೊಡಿಸುವುದೇ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಸರ್ಕಾರ ಶಿಕ್ಷಣ ವಂಚಿತ ಮಕ್ಕಳಿಗೆ ಶಿಕ್ಷಣ ದೊರೆಯುವಂತೆ ಮಾಡುವುದರ ಮೂಲಕ ಶಿಕ್ಷಣ ವಾಹಿನಿಗೆ ತರಲು ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅದನ್ನು ಸದುಪಯೋಗಪಡೆಸಿಕೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಕೋಮರಯ್ಯ ತಿಳಿಸಿದರು.
ಪಟ್ಟಣದ ಶಾಸಕರ ಮಾದರಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ 6ರಿಂದ 16 ವರ್ಷದೊಳಗಿನ ಮಕ್ಕಳ ಶಿಕ್ಷಣದ ಬಗ್ಗೆ ಶಾಲಾ ಹಂತದ ಸಮೀಕ್ಷೆಯನ್ನು ನಡೆಸಲಾಗಿದೆ ಎಂದರು.
ಸಮೀಕ್ಷೆ: ಸದರಿ ಶಾಲಾ ಹಂತದ ಸಮೀಕ್ಷೆಯ ಅಂಕಿ ಅಂಶಗಳ ಆಧಾರದಂತೆ ಇಂದಿನಿಂದ ನ,13 ರಿಂದ 17 ರವರಗೆ ಕುಟುಂಬ ಸಮೀಕ್ಷೆ ನಡೆಯಲಿದ್ದು, ಪ್ರತಿಯೊಬ್ಬರೂ ಸಹಕರಿಸುವಂತೆ ಮನವಿಮಾಡಿದರು.
ತಾಪಂ ಸದಸ್ಯ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ರಂಜನ್ ಅಜಿತ್ ಕುಮಾರ್ ಉದ್ಘಾಟಿಸಿ, ಮಾತನಾಡಿ ಸರ್ಕಾರ ವಿದ್ಯಾರ್ಥಿಗಳಿಗೆ ಬಿಸಿ ಊಟ, ಹಾಲು, ಸಮವಸ್ತ್ರ ಮತ್ತು ಪಠ್ಯಪುಸ್ತಕ ಗಳನ್ನು ನೀಡುವುದರೊಂದಿಗೆ ಉತ್ತಮ ಶಿಕ್ಷಣ ನೀಡುತ್ತಿದೆ. ಸರ್ಕಾರದ ಈ ಕಾರ್ಯಕ್ರಮವನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಪಡೆದುಕೊಳ್ಳುವುದರೊಂದಿಗೆ ದೇಶದ ಸತ್ಪ್ರಜೆಗಳಾಗುವಂತೆ ಸಲಹೆ ನೀಡಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.