ಪುಸ್ತಕಗಳು ನಿತ್ಯ ಸಂಗಾತಿಗಳಾಗಲಿ
ಚಿಕ್ಕಮಗಳೂರು, ನ.14
ಪುಸ್ತಕಗಳು ನಿರಂತರ ಸ್ನೇಹಿತರಾಗಿ ನಮ್ಮ ಜೊತೆಗಿರುವ ನಿತ್ಯ ಸಂಗಾತಿಗಳು ಎಂದು ಕುವೆಂಪು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ. ಶ್ರೀಕಂಠ ಕೂಡಿಗೆ ಹೇಳಿದರು.
ನಗರದ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಗುರುವಾರ ನಡೆದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪುಸ್ತಕಗಳನ್ನು ಓದುವ ಹವ್ಯಾಸ ಕಡಿಮೆಯಾಗುತ್ತಿದೆ. ಪುಸ್ತಕಗಳ ಸ್ಥಾನ ವಿದ್ಯುನ್ಮಾನ ಮಾಧ್ಯಮಗಳು, ಇ. ಪೇಪರ್‌ಗಳು ಆಕ್ರಮಿಸಿಕೊಳ್ಳುವಂತಹ ಸಂದಿಗ್ಧತೆಯಾಗಿದ್ದರೂ ಪುಸ್ತಕಗಳು ಎಂದಿಗೂ ಅನಿವಾರ್ಯತೆಯನ್ನು ಸೃಷ್ಟಿಸಿಕೊಳ್ಳುತ್ತವೆ ಎಂದರು.
ಸುಮ್ಮನೆ ಓದಬೇಡಿ: ಓದುಗರು ಪುಸ್ತಕಗಳಲ್ಲಿ ಬಳಸುವ ಕ್ರಮದ ಬಗ್ಗೆಯೂ ವಿಶ್ಲೇಷಿಸಿ, ಪುಸ್ತಕಗಳನ್ನು ಕ್ರಮಬದ್ಧವಾಗಿ ಓದುವಂತಹ ಶಿಸ್ತುಗಳನ್ನು ಅಳವಡಿಸಿಕೊಂಡಾಗ ನಮ್ಮ ಮನಸ್ಸು ಉಲ್ಲಾಸ ಭರಿತವಾಗುತ್ತದೆ. ಪುಸ್ತಕಗಳನ್ನು ಓದಿ ಮುಗಿಸಬೇಕೆಂಬ ಉದ್ದೇಶದಿಂದ ಮಾತ್ರ ಓದದೇ ಮನಸ್ಸಿಟ್ಟು ಓದಿದರೆ ಮಾತ್ರವೇ ಪುಸ್ತಕಗಳಲ್ಲಿನ ವಿಚಾರಗಳನ್ನು ಮನನ ಮಾಡಿಕೊಳ್ಳಲು ಸಾದ್ಯ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಾಹಿತಿ ಡಾ. ಚಂದ್ರಶೇಖರ್ ಪಾಟೀಲ್ (ಚಂಪಾ) ಮಾತನಾಡಿ, ನಿಜವಾದ ಅರಿವು, ಅನಂದ, ಜ್ಞಾನವನ್ನು ಪುಸ್ತಕಗಳ ಓದಿನ ಮೂಲಕವೇ ಮಾತ್ರ ಪಡೆಯಲು ಸಾಧ್ಯ ಎಲ್ಲರೂ ಓದುವ ಅಭಿರುಚಿ ಬೆಳೆಸಿಕೊಳ್ಳಬೇಕೆಂದರು.
ಮನುಷ್ಯನ ಜ್ಞಾನ ವಿಸ್ತಾರಗೊಳ್ಳಲು ಪುಸ್ಯಕಗಳು ಸಹಕಾರಿಯಾಗಿದ್ದು, ಈ ದಿಶೆಯಲ್ಲಿ ಗ್ರಂಥಾಲಯಗಳಲ್ಲಿನ ಪುಸ್ತಕಗಳು ಓದುಗರ ಮನ ಮೆದುಳುಗಳಲ್ಲಿ ಪ್ರವೇಶಿಸಲಿ ಎಂದು ಆಶಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾಧಿಕಾರಿ ಶೇಖರಪ್ಪ ಅವರು ಮಾತನಾಡಿ, ಗ್ರಂಥಾಲಯಗಳಲ್ಲಿನ ಸಂಗ್ರಹಗೊಂಡಿರುವ ಪುಸ್ತಕಗಳಲ್ಲಿನ ಜ್ಞಾನ ಭಂಡಾರವನ್ನು ಓದುಗರು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂದರು. ಜಿಲ್ಲಾ ಕೇಂದ್ರ ಗ್ರಂಥಾಲಯದ ಅಧಿಕಾರಿ ಬಿ. ಚಂದ್ರೇಗೌಡ ಪ್ರಾಸ್ತಾವಿಕವಾಗಿ ಮಾತನಾಡಿ, ಪುಸ್ತಕಗಳ ಪ್ರದರ್ಶನದ ಮೂಲಕ ಪುಸ್ತಕ ಓದುವ ಸಂಸ್ಕೃತಿ ಬೆಳೆಸಲು ಕಾರ್ಯಕ್ರಮ ರೂಪಿಸಲಾಗುತ್ತಿದೆ ಎಂದರು. ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶ್ರೀಕಂಠ ಕೂಡಿಗೆಯವರನ್ನು ಸನ್ಮಾನಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

