ಚಿಕ್ಕಮಗಳೂರು

ರಾ.ಹೆ. ಅಭಿವೃದ್ಧಿಗೆ ಕೇಂದ್ರ ಒಪ್ಪಿಗೆ: ಹೆಗ್ಡೆ

Published On :

ತರೀಕೆರೆ: 25 ಕೋಟಿಯಲ್ಲಿ ಬೀರೂರು ತರೀಕೆರೆ ನಡುವಿನ 17 ಕಿಮೀ ರಾ.ಹೆ. ಅಭಿವೃದ್ಧಿ ಕಾರ್ಯಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಸಂಸದ ಜಯಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ. ಅವರು, ಸಮೀಪದ ನಾರಾಣಾಪುರದಲ್ಲಿ ಸುದ್ದಿಗಾರರೊಡನೆ ಮಾತನಾಡಿ, ಬೀರೂರಿನಿಂದ ರಾ.ಹೆ. 140ನೇ ಕೀ.ಮೀ ನಿಂದ 167ನೇ ಕಿ.ಮೀ ವರೆಗೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದರು. ಮುಂದಿನ ಲೋಕಸಭಾ ಚುನಾವಣೆಗೆ ತಾವು ಸಂಸತ್ ಕ್ಷೇತ್ರದಾದ್ಯಂತ ಕೈಗೊಳ್ಳುತ್ತಿರುವ ಅಭಿವೃದ್ಧಿಯೇ ಆಧಾರ ಎಂದು ತಿಳಿಸಿದ ಅವರು ನರೇಂದ್ರ ಮೋದಿ ಅಲೆ ಕೇವಲ ಮಾಧ್ಯಮಗಲ ಸೃಷ್ಟಿ ಎಂದು ತಿಳಿಸಿದರು. ಶಾಸಕ ಜಿ.ಎಚ್. ಶ್ರೀನಿವಾಸ್ ಮಾತನಾಡಿ, ತರೀಕೆರೆ ಪಟ್ಟಣದ ರಾ.ಹೆ. ವ್ಯಾಪ್ತಿಯಲ್ಲಿ,  ಡಿವೈಡರ್ ಅಳವಡಿಸಿ ಚತುಷ್ಪಥ ರಸ್ತೆ ನಿರ್ಮಾಣ, ಚರಂಡಿ ನಿರ್ಮಾಣ, ವಿದ್ಯುತ್ ಕಂಬಗಳ ಸ್ಥಳಾಂತರ, ಫುಟ್ ಪಾತ್ ನಿರ್ಮಾಣ ಇತ್ಯಾದಿಗಳನ್ನು ಕೈಗೊಂಡು ಹೆದ್ದಾರಿಯನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಲಾಗುವುದು. ಈ ಬಗ್ಗೆ ಕೇಂದ್ರ ಭೂ ಸಾರಿಗೆ ಸಚಿವಾಲಯಕ್ಕೆ ರಸ್ತೆ ಅಭಿವೃದ್ಧಿ ಅಂದಾಜು ಪಟ್ಟಿಯ ಪ್ರಸ್ತಾವನೆ ಕಳುಹಿಸಲಾಗಿದ್ದು, ತಾವು ಸಂಸತ್ ಸದಸ್ಯರೊಡಗೂಡಿ ಅಂದಾಜು ಪಟ್ಟಿಗೆ ಶೀಘ್ರದಲ್ಲೇ ಅನುಮೋದನೆ ಪಡೆಯಲಾಗುವುದು ಎಂದು  ತಿಳಿಸಿದರು. ಅಮೃತಮಹಲ್ ಅವ್ಯವಹಾರ ತನಿಖೆಗೆ ಸರ್ಕಾರ ತನಿಖಾ ಸಮಿತಿ ರಚಿಸಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.