ಚಿಕ್ಕಮಗಳೂರು

ಕೊಡುಗೆ ಸದುಪಯೋಗಪಡಿಸಿಕೊಳ್ಳಿ

Published On :

ಕ.ಪ್ರ.ವಾರ್ತೆ,  ಮೂಡಿಗೆರೆ ನ.14 ಎಸ್‌ಬಿಐ ಉದ್ಯಮ ವಲಯದ ಸಾಮಾಜಿಕ ಹೊಣೆಗಾರಿಕೆ ಯೋಜನೆಯಡಿಯಲ್ಲಿ ಗ್ರಾಮೀಣ ಪ್ರದೇಶ ಸೇರಿದಂತೆ ಇತರೆ ಸರ್ಕಾರಿ ಶಾಲೆಗಳಿಗೆ ಕಾರ್ಬೋಡ್, ಸೀಲೀಂಗ್ ಫ್ಯಾನ್‌ಗಳು ಮತ್ತು ಕುಡಿಯುವ ಶುದ್ಧೀಕರಣ ಯಂತ್ರ ನೀಡಲಾಗುತ್ತಿದ್ದು, ಇದನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಎಸ್‌ಬಿಐ ಶಾಖಾ ವ್ಯವಸ್ಥಾಪಕ ನೀಲಕಂಠ ತಿಳಿಸಿದರು.
ಮಕ್ಕಳ ದಿನಾಚರಣೆ ಅಂಗವಾಗಿ ತಾಲೂಕಿನ ಕುನ್ನಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಜಲ ಶುದ್ಧೀಕರಣ ಯಂತ್ರವನ್ನು ಕೊಡುಗೆಯಾಗಿ ನೀಡಿ ಅವರು ಮಾತನಾಡಿದರು.
ಸದುಪಯೋಗ: ಶಾಲೆಗಳಲ್ಲಿ ಅದರಲ್ಲೂ ಗ್ರಾಮೀಣ ಪ್ರದೇಶದ ಶಾಲೆಗಳ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ದ ಈ ಯಂತ್ರವನ್ನು ನೀಡಲಾಗಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ದಿನೇಶ್ ಮಾತನಾಡಿ, ಭಾರತದ ಅತಿ ದೊಡ್ಡ ಬ್ಯಾಕ್ ಆದ ಎಸ್‌ಬಿಐ ಗ್ರಾಮೀಣ ಪ್ರದೇಶದ ಶಾಲೆಗಳನ್ನು ಗುರುತಿಸಿ ವಿದ್ಯಾರ್ಥಿಗಳಿಗೆ ಕುಡಿಯುವ ನೀರು ಶುದ್ಧವಾಗಿರಲೆಂಬ ಉದ್ದೇಶದಿಂದ ಜಲ ಶುದ್ಧೀಕರಣ ಯಂತ್ರ ನೀಡಿದ್ದು, ಇದನ್ನು ಕಾಪಾಡಿಕೊಂಡು ಹೋಗುವ ಜವಬ್ದಾರಿ  ಶಿಕ್ಷಕರದ್ದಾಗಿದೆ ಎಂದರು.
ಹೆಮ್ಮೆಯ ಸಂಗತಿ: ಊರಿನ ಪ್ರಮುಖ ರಘುರಾಮ್ ಅಡ್ಯಂತಾಯ ಮಾತನಾಡಿ, ಎಸ್‌ಬಿಐ ಜನಪರ ಸೇವೆಯಲ್ಲಿ ತೊಡಗಿಸಿಕೊಂಡು ಗ್ರಾಮೀಣ ಪ್ರದೇಶದ ಶಾಲೆಗಳನ್ನು ಗುರುತಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು. ಶಾಲೆಯ ಮುಖ್ಯೋಪಾಧ್ಯಾಯಿನಿ ಸೀತಮ್ಮ ಸ್ವಾಗತಿಸಿದರು. ಶಿಕ್ಷಕಿ ವಸಂತ ನಿರೂಪಿಸಿದರು. ಎಸ್‌ಬಿಐ  ಸಹಾಯಕ ವ್ಯವಸ್ಥಾಪಕ ಅಂಕೇಗೌಡ, ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಶಿವಾನಂದ್, ಬ್ಯಾಂಕಿನ ಸಿಬ್ಬಂದಿ ಜಾನ್ ಡಿಸೋಜ, ಜೋಸೆಫ್ ವಾಜ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.