ಚಿಕ್ಕಮಗಳೂರು

ಗುಬ್ಬಿಗಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಕೋತ್ಸವ

Published On :

ನರಸಿಂಹರಾಜಪುರ: ಗುಬ್ಬಿಗಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಕೋತ್ಸವ ಮತ್ತು ಮಕ್ಕಳ ದಿನಾಚರಣೆ ಕಾರ್ಯಕ್ರಮವು ಗುರುವಾರ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಸಮಾರಂಭ ಉದ್ಘಾಟಿಸಿ ಮಾತನಾಡಿ, ಪ್ರಸಕ್ತ ಸಾಲಿನಿಂದ ಕಲಿಕೆಯ ಬಗ್ಗೆ ಮಕ್ಕಳಲ್ಲಿ ಆಸಕ್ತಿ ಮೂಡಿಸುವ ದೃಷ್ಟಿಯಿಂದ ಕಲಿಕೋತ್ಸವ ಕಾರ್ಯಕ್ರಮವನ್ನು ಶಿಕ್ಷಣ ಇಲಾಖೆಯು ಜಾರಿಗೆ ತರುತ್ತಿದೆ ಎಂದರು. ಕಾರ್ಯಕ್ರಮವನ್ನು ಶಾಲೆ, ಕ್ಲಸ್ಟರ್, ತಾಲೂಕು, ಜಿಲ್ಲೆ ಹಾಗೂ ರಾಜ್ಯ ಮಟ್ಟದ ಹಂತಗಳಲ್ಲಿ ನಡೆಸಲಾಗುತ್ತದೆ. ಕಲಿಕೋತ್ಸವದಿಂದ ಕಲಿಕೆಯಲ್ಲಿ ಹಿಂದುಳಿದ ಮಕ್ಕಳು ಮತ್ತೆ ಉತ್ತೇಜಿತರಾಗಿ ಶಿಕ್ಷಣ ಪಡೆಯಲಿದ್ದಾರೆ. ಈ ಕಾರ್ಯಕ್ರಮಕ್ಕೆ ಶಾಲಾ ಎಸ್ಡಿಎಂಸಿ ಸದಸ್ಯರು ಹಾಗೂ ಪೋಷಕರು ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು. ಮುಖ್ಯ ಅತಿಥಿಗಳಾದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ಮಯಾಧಿಕಾರಿ ರಾಜಪ್ಪ ಮಾತನಾಡಿ, ಕಲಿಕೋತ್ಸವ ಕಾರ್ಯಕ್ರಮದಿಂದ ಗ್ರಾಮೀಣ ಭಾಗದಲ್ಲಿ ಹೆಚ್ಚು ಅನುಕೂವಾಗಲಿದೆ ಎಂದು ಅಭಿಪ್ರಾಯಪಟ್ಟರು. ಸಭೆಯಲ್ಲಿ ಎಸ್ಡಿಎಂಸಿ ಅಧ್ಯಕ್ಷೆ ವಸಂತಿ, ಮುಖ್ಯಶಿಕ್ಷಕ ಮೋಗಣ್ಣಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.