ಚಿಕ್ಕಮಗಳೂರು

'ನಾಡಿನ ಕುರಿತು ಅಭಿಮಾನ ಬೆಳೆಸಿಕೊಳ್ಳಿ'

Published On :

ಚಿಕ್ಕಮಗಳೂರು: ಕನ್ನಡಿಗರು ತಮ್ಮ ಮಾತೃ ಭಾಷೆಯ ಬಗ್ಗೆ ತಾತ್ಸಾರ ಮನೋಭಾವನೆಯನ್ನು ಬಿಡಬೇಕು. ನಾಡು ನುಡಿಯ ಬಗ್ಗೆ ಅಭಿಮಾನವನ್ನು ಬೆಳೆಸಿಕೊಳ್ಳುವುದರ ಜೊತೆಗೆ ಸ್ವಾಭಿಮಾನಿಗಳಾಗಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ತೇಗೂರು ಜಗದೀಶ್ ಹೇಳಿದ್ದಾರೆ.
ನಗರದ ಬೈಪಾಸ್ ರಸ್ತೆಯ ಆಶ್ರಯ ಬಡಾವಣೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಶುಕ್ರವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡಿಗರು ನಿರಭಿಮಾನಿಗಳಾಗಿರುವುದರಿಂದಾಗಿ ರಾಜ್ಯದಲ್ಲಿ ಕನ್ನಡ ಭಾಷೆಯ ಬೆಳವಣಿಗೆ ಕುಂಠಿತವಾಗುತ್ತಿದೆ ಎಂದು ವಿಷಾದಿಸಿದರು.
ಅಭಿಮಾನ ಶೂನ್ಯತೆ: ಕನ್ನಡಿಗರಲ್ಲಿರುವ ಆಲಸ್ಯ ಮನೋಭಾವ, ಅಭಿಮಾನ ಶೂನ್ಯತೆ ಮತ್ತು ಸ್ವಾಭಿಮಾನದ ಕೊರತೆಯ ಪರಿಣಾಮ ರಾಜ್ಯದಲ್ಲಿಂದು ಅನ್ಯ ಭಾಷಿಗರ ಕೈಮೇಲಾಗುತ್ತಿದೆ. ನಾಡಿನೆಲ್ಲೆಡೆ ಇತರ ಭಾಷೆಗಳು ವಿಜೃಂಭಿಸುತ್ತಿವೆ. ಈ ಬೆಳವಣಿಗೆಯಿಂದಾಗಿ ನಮ್ಮ ಸಂಸ್ಕೃತಿ ಮತ್ತು ಸಂಸ್ಕಾರ ನಾಶವಾಗುತ್ತಿದೆ ಎಂದು ತಿಳಿಸಿದರು.
ಈಗಲಾದರೂ ಕನ್ನಡಿಗರು ಎಚ್ಚೆತ್ತು ಮಾತೃ ಭಾಷೆಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳುವುದರ ಜೊತೆಗೆ ಸ್ವಾಭಿಮಾನ ವನ್ನು ರೂಢಿಸಿಕೊಂಡರೆ ರಾಜ್ಯದಲ್ಲಿ ಕನ್ನಡ ಭಾಷೆ, ಸಂಸ್ಕೃತಿ ಮತ್ತು ಸಂಸ್ಕಾರ ಉಳಿಯುತ್ತದೆ ಎಂದು ಅವರು ಹೇಳಿದರು.
ನಗರ ಸ್ವಚ್ಛತಾ ಸಮನ್ವಯಾಧಿಕಾರಿ ವಿಶ್ವನಾಥ್ ಮಾತನಾಡಿ, ಇಂದಿನ ಯುವ ಜನತೆ ತಮ್ಮ ಬದುಕಿನಲ್ಲಿ ಮಾತೃ ಭಾಷೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಕನ್ನಡ ಭಾಷೆಯನ್ನು ಮುಂದಿನ ಪೀಳಿಗೆಗೆ ಉಳಿಸುವ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.
ರಾಜ್ಯೋತ್ಸವದ ಅಂಗವಾಗಿ ಸಾರ್ವಜನಿಕರಿಗೆ ಸಿಹಿ ವಿತರಿಸಲಾಯಿತು. ಕರ್ನಾಟಕ ರಕ್ಷಣಾ ವೇದಿಕೆಯ ನಗರಾಧ್ಯಕ್ಷ ವಿನೋದ್ಕುಮಾರ್, ಉಪಾಧ್ಯಕ್ಷ ಇರ್ಷಾದ್ ಅಹ್ಮದ್, ಕಾರ್ಯದರ್ಶಿ ಕುಮಾರ್, ಬಡಾವಣೆಯ ಮುಖಂಡರಾದ ನಂದೀಶ್, ಜಿ.ಕೆ. ರಘು, ಮುರಳಿ,  ಶ್ರೀನಿವಾಸ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.