ಚಿಕ್ಕಮಗಳೂರು

ಬಿಜೆಪಿ ಬೈಕ್ ರ್ಯಾಲಿಗೆ ಚಾಲನೆ

Published On :

ಕ.ಪ್ರ.ವಾರ್ತೆ ಟಿ ಮೂಡಿಗೆರೆ ಟಿ  ನ.15
ಜನಪರ, ರೈತಪರ ಅಭಿವೃದ್ಧಿಗೆ ನರೇಂದ್ರ ಮೋದಿಯವರನ್ನು ಬೆಂಬಲಿಸುವಂತೆ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಎಂ.ಕೆ. ಪ್ರಾಣೇಶ್ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಿಜೆಪಿ ಯುವ ಮೋರ್ಚಾ ಬೈಕ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಅವರು, ಹಿಂದೆ ಬಿಜೆಪಿ ಸರ್ಕಾರ ದೇಶದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಾಗ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಯಶಸ್ಸನ್ನು ಸಾಧಿಸಿದೆ.
ನ.17ರಂದು ಬೆಂಗಳೂರಿನಲ್ಲಿ ನಡೆಯಲಿರುವ ಮೋದಿಯವರ ಭಾರತ ಗೆಲ್ಲಿಸಿ ಸಮಾವೇಶದ ಹಿನ್ನೆಲೆಯಲ್ಲಿ ಯುವ ಮೋರ್ಚಾ ರ್ಯಾಲಿಗೆ ಚಾಲನೆ ನೀಡಲಾಗಿದೆ ಎಂದರು.
ಪ್ರವಾಸಿ ಮಂದಿರದಿಂದ ಹೊರಟ ಬೈಕ್ ರ್ಯಾಲಿ ಪಟ್ಟಣದ ಮುಖ್ಯ ರಸ್ತೆ, ವಿದ್ಯಾನಗರ, ಬೆಳಗುಳ, ಹ್ಯಾಂಡ್ಪೋಸ್ಟ್ ಮೂಲಕ ಸಾಗುತ್ತಾ ಬಿಜೆಪಿ ಮತ್ತು ನರೇಂದ್ರ ಮೋದಿ ಪರ ಘೋಷಣೆಗಳನ್ನು ಕೂಗುತ್ತಾ ಸಾಗಿ ನಂತರ ಪ್ರವಾಸಿ ಮಂದಿರದಲ್ಲಿ ಮುಕ್ತಾಯಗೊಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಎಂ.ಆರ್. ಜಗದೀಶ್, ಎಂ.ಸಿ. ಸುದರ್ಶನ್, ಎಂ.ಎಲ್. ಕಲ್ಲೇಶ್, ಜೆ.ಡಸ್. ರಘು, ತಾಲೂಕು ವಕ್ತಾರ ಕಣಚೂರ್ ವಿನೋದ್, ನಿಡಗೋಡ್ ಸುನೀಲ್, ನಗರಾಧ್ಯಕ್ಷ ಪ್ರವೀಣ್, ಉಪಾಧ್ಯಕ್ಷ ದಯಾನಂದ್, ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ರಾಘವೇಂದ್ರ, ಪಂಚಾಕ್ಷರಿ ಸೇರಿದಂತೆ ಯುವ ಮೋರ್ಚಾ ಮತ್ತು ಬಿಜೆಪಿ ಸದಸ್ಯರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.