ಚಿಕ್ಕಮಗಳೂರು

ಹೃದಯ ಭಾವನೆ ಒಂದಾದರೆ ಯಶಸ್ಸು ಸಾಧ್ಯ: ಪೇಜಾವರ ಶ್ರೀ

Published On :

ಶೃಂಗೇರಿ: ಪ್ರತಿಯೊಂದು ಸಮ್ಮೇಳನಗಳು ವಿಭಿನ್ನ ದೃಷ್ಠಿಕೋನ ಹೊಂದಿದ್ದರೂ ಹೃದಯದ ಭಾವನೆ ಒಂದಾಗಿದ್ದರೆ ಮಾತ್ರ ಸಮ್ಮೇಳನಗಳು ಯಶಸ್ಸು ಹೊಂದಲು ಸಾಧ್ಯ. ಭಿನ್ನತೆ ಇದ್ದಲ್ಲಿ ಸಹಿಷ್ಣತೆ ಸೃಷ್ಠಿಸಿಕೊಳ್ಳಬೇಕು ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ್ವರ ತೀರ್ಥರು ತಿಳಿಸಿದರು.
ಅವರು ಪಟ್ಟಣದ ಮಹಾತ್ಮ ಗಾಂಧಿ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆಯುತ್ತಿರುವ ವಿಶ್ವ ಹೃದಯ ಸಮ್ಮೇಳನದ ಎರಡನೆಯ ದಿನದ ಕಾರ್ಯಕ್ರಮದ ದಿವ್ಯ ಸಾನ್ನಿದ್ಯ ವಹಿಸಿ ಮಾತನಾಡಿದರು.
ಪರಮಾತ್ಮನನ್ನು ವಿವಿಧ ರೂಪಗಳಲ್ಲಿ ಆರಾಧಿಸುತ್ತಿದ್ದರೂ ಭಕ್ತಿಯಲ್ಲಿ ಏಕತೆ ರೂಢಿಸಿಕೊಳ್ಳಬೇಕು. ಶ್ರದ್ಧೆ, ಭಕ್ತಿ ಇರಬೇಕು. ಭಗವಂತ ಸರ್ವಾಂತರಯಾಮಿ ನಿಜವಾದ ಭಕ್ತಿ, ಶ್ರದ್ಧೆಯಿಂದ ಮಾತ್ರ ಪರಮಾತ್ಮನ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದರು.
ಧರ್ಮದ ವಿಷಯದಲ್ಲಿ ಪರಸ್ಪರ ಕಚ್ಚಾಡಿಕೊಳ್ಳುತ್ತಾರೆ. ಮಾನಸಿಕವಾಗಿ, ಭಾವನಾತ್ಮಕವಾಗಿ ನಾವು ರಾಷ್ಟ್ರೀಯ ಭಾವನೆ ಬೆಳೆಸಿಕೊಂಡು ದೇಶದ ಸಂಸ್ಕೃತಿ, ಪರಂಪರೆಗೆ ಕೊಡುಗೆ ನೀಡಬೇಕು. ವಿವಿಧ ರಾಜಕೀಯ ಪಕ್ಷಗಳನ್ನು ಒಗ್ಗೂಡಿಸಿ ಒಂದೇ ರಾಜಕೀಯ ಪಕ್ಷವಾಗಿ ಮಾರ್ಪಡಿಸಿದರೆ ಅದು ಸರ್ವಾಧಿಕಾರವಾಗುತ್ತದೆ ಎಂದರು.
ಮುಖ್ಯ ಅತಿಥಿಗಳಾಗಿ ಆದಿಚುಂಚನಗಿರಿ ಶೃಂಗೇರಿ ಶಾಖಾಮಠದ ಶ್ರೀ ಗುಣನಾಥ ಸ್ವಾಮೀಜಿ, ಋಷಿ ಸಂಸ್ಕೃತಿ ವಿದ್ಯಾ ಕೇಂದ್ರ ಟ್ರಸ್ಟ್ನ ಋಷಿ ಪ್ರಭಾಕರ್ಜಿ ಮತ್ತಿತರರು ಉಪಸ್ಥಿತರಿದ್ದರು.
ಶ್ರೀ ಮಠದ ಆಡಳಿತಾಧಿಕಾರಿ ಡಾ.ವಿ.ಆರ್.ಗೌರೀಶಂಕರ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.